Pramāṇa · Search · About · API

Jaimini Bharata (Kannada) 2.25

Jaimini Bhārata (Kannada) 2.25

Language
Kannada

2.25

ಇನಿತೆಲ್ಲಮಂ ನೋಡುತಿರ್ದಂ ಸುಧನ್ವನನು|
ದಿನಮಂತರಂಗದೊಳ್ ಧ್ಯಾನಿಸುವ ನಿರ್ಮಲಾ |
ತ್ಮನದಿವ್ಯಮೂರ್ತಿಯಂ ಪಾರ್ಥನ ರಥಾಗ್ರದೊಳ್ ಕಂಡು ಪುಳಕೋದ್ಗಮದೊಳು ||
ತನುವನೀಡಾಡಿ ಸಾಷ್ಟಾಂಗಪ್ರಣಾಮದಿಂ |
ಮನದೊಳಗೆ ಹಿಗ್ಗಿ ತನ್ನಾಳ್ತನಕ್ಕೆ ಸಾಕಿನ್ನು |
ನೆನೆದೆಣಿಕೆ ಕೈಸಾರ್ದುದೆಂದು ಕಣ್ದಣಿಯದಚ್ಯುತನಂ ನಿರೀಕ್ಷಿಸಿದನು ||25||