Jaimini Bharata (Kannada) 3.44
Jaimini Bhārata (Kannada) 3.44
- Language
- Kannada
3.44
ಕೆಡೆದೊಡಲ ಸೀಳಿಂದೆ ಕಡಿವಡೆದ ತೋಳಿಂದೆ |
ತೊಡೆಮಡದ ತುಂಡಿಂದೆ ನೆಣವಸೆಯ ಜೊಂಡಿಂದೆ |
ಬಿಡುಮಿದುಳ ತುಂಡದಿಂ ರುಂಡದಿಂ ಮುಂಡದಿಂ ಖಂಡದಿಂದೆ
ಅಡಗುಗಳ ತಿರುಳಿಂದೆ ನಿಡುನರದ ಕರುಳಿಂದೆ |
ಕಡಲಿಡುವ ನೆತ್ತರಿಂದೆಡವಿಡದೆ ಸತ್ತರಿಂ |
ದಿಡಿದಿರ್ದುದಾ ರಣದಲೋರಣದ ಮಾರಣದ ಕಾರಣದ ಪೂರಣದೊಳು ||44||