Pramāṇa · Search · About · API

Jaimini Bharata (Kannada) 3.8

Jaimini Bhārata (Kannada) 3.8

Language
Kannada

3.8

ಮೊಗಗೈಗಳಿಂ ತಮ್ಮೊಡಲ ನೀರನಾನೆಗಳ್ |
ತೆಗೆದು ಚೆಲ್ಲಲ್ ಪೊನಲ್ವರಿದ ಮಡುಗಳ ಕೆಸರೊ |
ಳೊಗೆದ ನೃಪಮಂಡಲದ ಕನಕಾಭರಣ ಕಿರಣ ತರುಣಾತಪದೊಳಲರ್ದು ||
ಮಿಗೆ ಸುಳಿವ ಚಾಮರಂಗಳ ರಾಜಹಂಸಾವ |
ಳಿಗಳ ಸಂಚಾರಮಂ ಕೆಳಗೊಂಡ ಬೆಳುದಾವ |
ರೆಗಳ ಹಂತಿಗಳಂತೆ ಪಡೆಯೊಳೆಸೆದುವು ತಳ್ತಿಡಿದ ಸತ್ತಿಗೆಯ ಸಾಲ್ಗಳು ||8||