Pramāṇa · Search · About · API

Jaimini Bharata (Kannada) 4.16

Jaimini Bhārata (Kannada) 4.16

Language
Kannada

4.16

ಅಂಗಮಿಲ್ಲದನ ಸಮರಂಗಮಂ ಪುಗಲಂಜಿ |
ತುಂಗವಿಕ್ರಮವಿಜಯಸಂಗರಕೆಳಸುವೆನೆಂ |
ಬಂಗವಣೆಯೆಂತುಂಟೆಂದಂಗನೆ ಬಲಾತ್ಕಾರದಿಂ ಗುರುಕುಚದ್ವಯವನು ||
ಸಂಗಡಿಸುವಂತಾರ್ಪಿನಿಂ ಗಾಢತರದೊಳಾ |
ಲಿಂಗನಂಗೈದು ಕುಡಿಗಂಗಳಿಂದವನ ಮೊಗ |
ದಿಂಗಿತವನಾರೈವ ಶೃಂಗಾರಚೇಷ್ಟೆಯ ಬೆಡಂಗನದನೇವೇಳ್ವೆನು ||16||