Jaimini Bharata (Kannada) 4.35
Jaimini Bhārata (Kannada) 4.35
- Language
- Kannada
4.35
ಹಿಂದೆ ಪ್ರಹ್ಲಾದನಂ ಪಾಲಿಸಿದೆ ಗಡ ದ್ರುಪದ |
ನಂದನೆಯ ಮಾನಮಂ ಕಾದೆ ಗಡ ಭಕ್ತರ್ಗೆ |
ಬಂದೆಡರನಾವಗಂ ಪರಿಹರಿಪೆ ಗಡ ದೇವ ನಿನ್ನಂ ಪೆಸರ್ಗೊಂಡೊಡೆ ||
ಇಂದು ಮೊರೆವೊಗುವೊಡಾರಂ ಕಾಣೆನಕಟ ಗೋ |
ವಿಂದ ನೀನಲ್ಲದೆವಿಚಾರಿಸುವರಿಲ್ಲ ಸಲ |
ಹೆಂದವಂ ಚಿತ್ತದೊಳ್ ಕೃಷ್ಣನಂ ಧ್ಯಾನಿಸುತೆ ನಿರ್ಭಯದೊಳಿರುತಿರ್ದನು ||35||