Karnata Bharata Kathamanjari 1.11: ಸಟೀಕಾ (೪-ವಿರಾಟಪರ್ವ::ಸಂಧಿ-೧೦)
Karṇāṭa Bhārata Kathāmañjarī 1.11
- Language
- Kannada
ಸಟೀಕಾ (೪-ವಿರಾಟಪರ್ವ::ಸಂಧಿ-೧೦)
1.11.p1
<ಕುಮಾರವ್ಯಾಸಭಾರತ-ಸಟೀಕಾ
1.11.p2
ಕುಮಾರವ್ಯಾಸ ಭಾರತ/ಸಟೀಕಾ (೪-ವಿರಾಟಪರ್ವ::ಸಂಧಿ-೧೦)
1.11.p3
ಸೂಚನೆ:
1.11.p4
ರಾಯ ಪಾಂಡವ ಜೀವ ಭಕ್ತನಿ
ಕಾಯ ಲಂಪಟನಮಲ ಯಾದವ
ರಾಯ ಬಿಜಯಂಗೈದನಭಿಮನ್ಯುವಿನ ಪರಿಣಯಕೆ||
1.11.p5
~~ಓಂ~~
1.11.p6
ಪಾಡವರು ವಿರಾಟನ ಸಿಂಹಾಸನದಲ್ಲಿ - ವಿರಾಟನ ಪ್ರತಿಕ್ರಿಯೆ
1.11.1
ಕೇಳು ಜನಮೇಜಯ ಧರಿತ್ರೀ
ಪಾಲ ಚರಿತಜ್ಞಾತವಾಸವ
ಬೀಳುಕೊಟ್ಟರು ಬಹಳ ಹರುಷದಲಿರುಳ ನೂಕಿದರು |
ಮೇಲಣವರಭ್ಯುದಯವನು ಕೈ
ಮೇಳವಿಸಿ ಕೊಡುವಂತೆ ಮೂಡಣ
ಶೈಲ ಮುಖದಲಿ ಕೆಂಪು ಸುಳಿದುದು ಭಾನುಮಂಡಲದ ||೦೧ ||
1.11.2
ಏಳು ಕುದುರೆಯ ಖುರಪುಟದ ಕೆಂ
ದೂಳಿಯೋ ಕುಂತೀ ಕುಮಾರಕ
ರೇಳಿಗೆಯ ತನಿರಾಗರಸವುಬ್ಬರಿಸಿ ಪಸರಿಸಿತೊ |
ಹೇಳಲೇನು ಮಹೇಂದ್ರ ವರ ದಿ
ಗ್ಬಾಲಕಿಯ ಬೈತಲೆಯ ಕುಂಕುಮ
ಜಾಲವೋ ಹೇಳೆನಲು ದಿನಪನ ಚೂಣಿ ರಂಜಿಸಿತು || ೦೨ ||
1.11.3
ಸರಸಿಜದ ಪರಿಮಳಕೆ ತುಂಬಿಯ
ಬರವ ಕೊಟ್ಟನು ಚಂದ್ರಕಾಂತಕೆ
ಬೆರಗನಿತ್ತನು ಜಕ್ಕವಕ್ಕಿಯ ಸೆರೆಯ ಬಿಡಿಸಿದನು |
ಕೆರಳಿ ನೈದಿಲ ಸಿರಿಯ ಸೂರೆಯ
ತರಿಸಿದನು ರಿಪುರಾಯ ರಾಜ್ಯವ
ನೊರಸಿದನು ರವಿ ಮೂಡಣಾದ್ರಿಯೊಳಿತ್ತನೋಲಗವ || ೦೩ ||
1.11.4
ಹರ ಹರ ಶ್ರೀಕಾಂತನೆನುತೈ
ವರು ಕುಮಾರಕರುಪ್ಪವಡಿಸಿದ
ರರಿ ವಿದಾರರು ಮಾಡಿದರು ಮಾಂಗಲ್ಯ ಮಜ್ಜನವ |
ವರ ವಿಭೂಷಣ ಗಂಧ ಮಾಲ್ಯಾಂ
ಬರದಿ ಪರಿವೃತರಾದರವನೀ
ಸುರರಿಗಿತ್ತರು ಧೇನು ಮಣಿ ಕನಕಾದಿ ವಸ್ತುಗಳ || ೦೪ ||
1.11.5
ತಮದ ಗಂಟಲನೊಡೆದ ಹರುಷ
ದ್ಯುಮಣಿ ಮಂಡಲದಂತೆ ಜೀವ
ಭ್ರಮೆಯ ಕವಚವ ಕಳೆದು ಹೊಳೆ ಹೊಳೆವಾತ್ಮನಂದದಲಿ |
ವಿಮಲ ಬಹಳ ಕ್ಷತ್ರ ರಶ್ಮಿಗ
ಳಮರಿ ದೆಸೆಗಳ ಬೆಳಗೆ ರಾಜೋ
ತ್ತಮ ಯುಧಿಷ್ಠಿರ ದೇವನೆಸೆದನು ರಾಜ ತೇಜದಲಿ || ೦೫ ||
1.11.6
ಪರಮ ಸತ್ಯವ್ರತ ಮಹಾಕ್ರತು
ವರದಲವಭೃತ ಮಜ್ಜನವ ವಿ
ಸ್ತರಿಸಿ ಭೀಮಾದಿಗಳು ಸಹಿತ ವಿರಾಟನರಮನೆಗೆ |
ಅರಸ ಬಂದನು ಮಣಿಖಚಿತ ಕೇ
ಸರಿಯ ಪೀಠವನಡರಿದನು ನಿಜ
ಚರಣ ಸೇವೆಯಲೆಸೆದರೊಡ ಹುಟ್ಟಿದರು ಪರುಟವಿಸಿ || ೦೬ ||
1.11.7
ಅವನಿಪನ ಸಿಂಹಾಸನವನೇ
ರುವ ಸಗರ್ವಿತರಾರು ನೋಡಿದ
ಡೆವೆಗಳುರಿವುದು ಹಾಯೆನುತ ಕಂಚುಕಿಗಳೈತಂದು ||
ಇವರನೀಕ್ಷಿಸಿ ಕ್ಷಾತ್ರ ತೇಜವ
ನವಗಡಿಸಲಂಜಿದರು ಹರಿ ತಂ
ದವದಿರೆಬ್ಬಿಸಿ ಬಿನ್ನವಿಸಿದರು ಮತ್ಸ್ಯಭೂಪತಿಗೆ || ೦೭ ||
1.11.8
ಜೀಯ ಸಿಂಹಾಸನಕೆ ದಿವಿಜರ
ರಾಯನೋ ಶಂಕರನೊ ಮೇಣ್ ನಾ
ರಾಯಣನೊ ನರರಲ್ಲ ದೇವರು ಬಂದು ನೋಡುವುದು ||
ಕಾಯಲಸದಳವೆಮಗೆನಲು ನಿ
ರ್ದಾಯದಲಿ ನೆಲೆಗೊಂಡ ನಿರ್ಜರ
ರಾಯನಾರೆಂದೆನುತಲಾಗ ವಿರಾಟ ಚಿಂತಿಸಿದ || ೦೮ ||
1.11.9
ಕರೆಸಿಕೊಂಡು ಪುರೋಹಿತನನು
ತ್ತರನನಖಿಳ ಮಹಾಪ್ರಧಾನರ
ನರಮನೆಯ ಹೊರವಂಟು ವೋಲಗಶಾಲೆಗೈತರುತ |
ಕರಗಿ ಸೂಸಿದ ಚಂದ್ರ ಬಿಂಬದ
ಕಿರಣ ಲಹರಿಗಳೆನಲು ವಿವಿಧಾ
ಭರಣ ಮುಕ್ತಾ ಪ್ರಭೆಯ ಕಂಡನು ನೃಪತಿ ದೂರದಲಿ || ೦೯ ||
1.11.10
ಹರನ ನಾಲಕು ಮುಖದ ಮಧ್ಯ
ಸ್ಫುರಿತದೀಶಾನನದೊಲಿರೆ ಸೋ
ದರ ಚತುಷ್ಟಯ ಮಧ್ಯದಲಿ ಕಂಡನು ಯುಧಿಷ್ಠಿರನ |
ಅರಸಿಯನು ವಾಮದಲಿ ವಿವಿಧಾ
ಭರಣ ಮಣಿ ರಶ್ಮಿಗಳ ಹೊದರಿನ
ಹೊರಳಿಯಲಿ ಕಣ್ಣಾಲಿ ಕೋರೈಸಿದವು ನಿಮಿಷದಲಿ || ೧೦ ||
1.11.11
ಮೇಳವೇ ಫಡ ಮನದ ಮತ್ಸರ
ಕಾಲಿಡಲು ತೆರಹಿಲ್ಲ ಮನುಜರ
ಹೋಲುವೆಯ ನಾಟಕದ ನಿರ್ಜರ ಮಂಡಲೇಶ್ವರರು |
ಆಲಿಗಳು ಮೇಲಿಕ್ಕಲಮ್ಮವು
ಶೂಲಪಾಣಿಯ ಪರಮ ತೇಜದ
ಚೂಳಿಯೋ ಶಿವ ಶಿವ ಎನ್ನುತ್ತ ವಿರಾಟ ಬೆರಗಾದ || ೧೧ ||
1.11.11_7
ಮೇಳ: ತಂಡ, ಗುಂಪು.
1.11.12
ವಲಲ ಕಂಕ ಬೃಹನ್ನಳೆಯ ಮೈ
ಸುಳಿವ ಹೋಲುವರೆಂದು ಕೆಲಬರು
ಕೆಲರಿದೆತ್ತಣ ನರರು ತೆಗೆ ಸುರಲೋಕ ಪಾಲಕರು |
ತಿಳಿಯಲರಿದೆಮಗೆಂದು ಕೆಲಬರು
ತಳವೆಳಗುಗೊಳುತಿರಲು ಮಂದಿಯ
ಕೆಲಕೆ ನೂಕಿಯೆ ತಂದೆಗುತ್ತರ ನಗುತ ಕೈಮುಗಿದ || ೧೨ ||
1.11.13
ತಾತ ಬಿನ್ನಹ ನಿನ್ನೆ ವೈರಿ
ವ್ರಾತವನು ಗೆಲಿದಾತನೀ ತೋ
ರ್ಪಾತನೀತನ ಮುಂದೆ ಮೆರೆವವ ಕೀಚಕಾಂತಕನು |
ಈತ ನಕುಲನು ವಾಮದಲಿ ನಿಂ
ದಾತ ಸಹದೇವಾಂಕನನಿಬರಿ
ಗೀತ ಹಿರಿಯನು ಧರ್ಮನಂದನನೆಂದು ತೋರಿಸಿದ ||೧೩ ||
1.11.14
ರಮಣಿಯೈವರಿಗೀಕೆ ಕೆಲದಲಿ
ಕಮಲಮುಖಿಯನು ನೋಡು ತಾವಿವ
ರಮಳ ಗುಣ ಗಂಭೀರ ರಾಯರು ಪಾಂಡು ನಂದನರು |
ನಮಗೆ ಭಾರಿಯ ಭಾಗ್ಯಲಕ್ಷ್ಮಿಯ
ಮಮತೆಯಾಯ್ತಿನ್ನೇನು ನೃಪಪದ
ಕಮಲದಲಿ ಬೀಳುವೆವು ನಡೆ ನಡೆ ಧನ್ಯರಹೆವೆಂದ || ೧೪ ||
1.11.15
ಈತನೇ ಧರ್ಮಜನು ದಿಟ ತಾ
ನೀತನೇ ಪವನಜನು ನಿಶ್ಚಯ
ವೀತನೇ ಫಲುಗುಣನು ಮಾದ್ರೀತನುಜರೇ ಇವರು |
ಈ ತಳೋದರಿ ದ್ರುಪದ ಸುತೆಯೇ
ಕೌತುಕವಲೇ ಭುವನಜನ ವಿ
ಖ್ಯಾತರೆಲ್ಲಿಂದೆಲ್ಲಿ ಮೂಡಿದರೆನುತ ಬೆರಗಾದ || ೧೫ ||
1.11.16
ವರುಷವೊಂದಜ್ಞಾತ ವಾಸವ
ನಿರದೆ ನೂಕಿದರಿಲ್ಲಿ ಬಳಕೆಯ
ಹೊರೆಯ ಹೆಸರವು ಬೇರೆ ನಡವಳಿಯಂಗವದು ಬೇರೆ |
ಮರುಳನಂತಿರೆ ಜಗಕೆ ತೋರನೆ
ಪರಮ ತತ್ವಜ್ಞಾನಿ ನಮ್ಮೀ
ಯರಸುತನ ಫಲವಾಯ್ತು ನಡೆಯೆಂದನು ಕುಮಾರಕನು || ೧೬ ||
1.11.17
ದರುಶನಕೆ ಮಣಿ ರತುನ ಕನಕವ
ತರಿಸಿ ಮುದದಲಿ ಮುಳುಗಿ ನಿಜ ಪರಿ
ಕರ ಸಹಿತ ಮೈಯಿಕ್ಕಿದನು ಕಾಣಿಕೆಯನೊಪ್ಪಿಸಿದ |
ವರ ನೃಪಾಲ ತ್ರಾಹಿ ಭುವನೇ
ಶ್ವರ ಪರಿತ್ರಾಯಸ್ವ ಕರುಣಿಸು
ಕರುಣಿಸೆಂದಂಘ್ರಿಗಳ ಹಿಡಿದನು ಮತ್ಸ್ಯ ಭೂಪಾಲ || ೧೭ ||
1.11.17_8
ಬಗೆದೆನಪರಾಧವನು ಕರುಣಾ
ಳುಗಳ ಬಲ್ಲಹ ನೀನು ನಿನ್ನಂ
ಘ್ರಿಗಳಿಗೀ ತಲೆ ಬಂಟ ನೀನಿದ ಕಾಯಬೇಕೆನುತ |
ಮಿಗೆ ಭಕುತಿ ಭಾವದಲಿ ನಿಜ ಮಂ
ತ್ರಿಗಳು ಮಕ್ಕಳು ಸಹಿತ ಮನ ನಂ
ಬುಗೆಯ ಮೆರೆದನು ಮತ್ಸ್ಯ ಭೂಪ ಮಹೀಶರಿದಿರಿನಲಿ ೧೮
1.11.19
ಆ ಸುದೇಷ್ಣೆ ಕುಮಾರಿಯೊಡನೆ ವಿ
ಳಾಸಿನೀಜನ ಸಹಿತ ರಾಣೀ
ವಾಸದಲ್ಲಿಗೆ ಬಂದು ಕಾಣಿಕೆ ಕೊಟ್ಟು ಪೊಡವಂಟು |
ಆ ಸಕಲ ಪರಿವಾರ ಪುರಜನ
ದೇಶಜನ ಕಾಣಿಕೆಯನಿತ್ತು ಮ
ಹೀಶನಿಗೆ ಮೈಯಿಕ್ಕಿ ಕಂಡುದು ಬಹಳ ಹರುಷದಲಿ || ೧೯ ||
1.11.20
ಮುಗುಳು ನಗೆಯಲಿ ಭೀಮ ಪಾರ್ಥರ
ಮೊಗವ ನೋಡಿದನವನಿಪತಿ ಕೈ
ಮುಗಿದು ತಲೆವಾಗಿದರು ತಮ್ಮಂದಿರು ಮಹಿಪತಿಗೆ |
ತೆಗೆಸಿದರು ಕಾಣಿಕೆಯನಾ ಮಂ
ತ್ರಿಗಳನಾ ಪರಿವಾರವನು ದೃಗು
ಯುಗದ ಕರುಣಾ ರಸದಲನಿಬರ ಹೊರೆದು ಮನ್ನಿಸಿದ || ೨೦ ||
1.11.21
ಶಿರವನೆತ್ತಿ ವಿರಾಟ ಭೂಪನ
ಕರೆದು ಹತ್ತಿರ ಪೀಠದಲಿ ಕು
ಳ್ಳಿರಿಸಲೊಡೆ ಮುರಿಚಿದನು ಕೆಲದಲಿ ಗದ್ದುಗೆಯ ಸರಿದು |
ಪರಮ ಸುಕೃತವಲಾ ಧರಾಧೀ
ಶ್ವರನ ದರುಶನವಾಯ್ತು ಧನ್ಯರು
ಧರೆಯೊಳೆಮಗಿನ್ನಾರು ಸರಿಯೆಂದನು ವಿರಾಟ ನೃಪ || ೨೧ ||
1.11.22
ದೇಶ ನಿಮ್ಮದು ನಗರ ಹೆಚ್ಚಿದ
ಕೋಶ ನಿಮ್ಮದು ನನ್ನ ಜೀವ ವಿ
ಳಾಸ ನಿಮ್ಮದು ಸಲಹಬೇಹುದು ಬಿನ್ನಹದ ಹದನ |
ಈ ಸಮಂಜಸ ದಿವಸದಲಿ ಸಿಂ
ಹಾಸನದಲಭಿಷೇಕವನು ಭೂ
ಮೀಶ ವಿಸ್ತರಿಸುವೆನು ಚಿತ್ತೈಸೆಂದನಾ ಭೂಪ || ೨೨ ||
1.11.23
ಎನಲು ನಗುತೆಂದನು ಮಹೀಪತಿ
ವಿನಯ ಮಧುರ ರಸಾಭಿಷೇಕವ
ನೆನಗೆ ಮಾಡಿದೆ ಸಾಕು ಪುನರುಕ್ತಾಭಿಷೇಕವದು |
ಜನವಿದೆಮ್ಮದು ನೀನು ನಮ್ಮಾ
ತನು ಧರಿತ್ರಿಯಿದೆಮ್ಮದೆಂಬೀ
ನೆನಹು ತಾನುಪಚಾರ ನಮಗೇಕೆಂದನಾ ಭೂಪ || ೨೩ ||
1.11.24
ನೊಂದವರು ಭೀಮಾರ್ಜುನರು ಹಗೆ
ಯಿಂದ ಹಳುವವ ಹೊಕ್ಕು ಮನಸಿನ
ಕಂದು ಕಸರಿಕೆ ಹೋಗದಾ ದುರ್ಯೋಧನಾದಿಗಳ |
ಕೊಂದು ಕಳದಲಿ ಮತ್ತೆ ಗಜ ಪುರಿ
ಗೆಂದು ಗಮಿಸುವೆವೆಂಬ ತವಕಿಗ
ರಿಂದು ತಾನೇ ಬಲ್ಲರೆಂದನು ಧರ್ಮನಂದನನು || ೨೪ ||
1.11.24_9
ಅಭಿಮನ್ಯು ಮತ್ತು ಉತ್ತರೆ ವಿವಾಹಕ್ಕೆ ಧರ್ಮಜನ ಒಪ್ಪಿಗೆ
1.11.24_10
ಎಂದನುತ್ತರನರಸನಂಘ್ರಿಯೊ
ಳಂದು ಮಕುಟವ ಚಾಚಿ ಬಿನ್ನಹ
ವಿಂದು ನೇಮವ ಕೊಡಿ ಕುಮಾರಿಯನೀವೆನರ್ಜುನಗೆ
ಎಂದಡೇಳೇಳೆಂದು ನಸು ನಗೆ
ಯಿಂದ ಪಾರ್ಥನ ನೋಡೆ ಕೈ ಮುಗಿ
ದೆಂದನಾತನು ಮನದ ನಿಶ್ಚಯವನು ಯುಧಿಷ್ಠಿರಗೆ ೨೫
1.11.24_11
ವರುಷವಿವಳಲಿ ನಾಟ್ಯ ವಿದ್ಯೆಯ
ಪರುಟವಿಸಿದೆನು ತಂದೆಯಂತೀ
ತರುಣಿ ಭಜಿಸಿದಳಾ ಪ್ರಕಾರ ರಹಸ್ಯ ದೇಶದಲಿ
ಗುರುತನದ ಗರುವಾಯಿಯೆತ್ತಲು
ಅರಸಿಯೆಂಬುದಿದಾವ ಮತವೀ
ವರ ಕುಮಾರಿಯನೀವಡಭಿಮನ್ಯುವಿಗೆ ಕೊಡಲೆಂದ ೨೬
ಪರುಠವಿಸು= ಪುರಸ್ಕರಿಸು. ನೆರವೇರಿಸು. ಉಂಟುಮಾಡು, ಅಭ್ಯಾಸ ಮಾಡಿಸು.
1.11.24_12
ಎವಗೆ ನೀವೇನಾತನೇನು
ತ್ಸವದೊಳಾಗಲಿಯೆನೆ ವಿರಾಟನ
ನವನಿಪತಿ ಮನ್ನಿಸಿದನಿತ್ತನು ನಗುತ ವೀಳೆಯವ
ಎವಗೆ ಪರಮಸ್ವಾಮಿಯೆಮ್ಮು
ತ್ಸವದ ನೆಲೆಯೆಮ್ಮೈವರಸು ಯಾ
ದವ ಶಿರೋಮಣಿ ಕೃಷ್ಣನಭಿಮತವೆಮ್ಮ ಮತವೆಂದ ೨೭
1.11.28
ಪೊಡವಿಯೊಡೆತನವೆಮಗೆ ಕ
ಟ್ಟೊಡೆಯ ಕೃಷ್ಣನು ಕೃಷ್ಣನೊಡಬ
ಟ್ಟೊಡೆ ವಿವಾಹ ನಿರಂತರಾಯವು ಚಿಂತೆ ಬೇಡೆನಲು |
ಒಡಬಡಲಿ ಮೇಣಿರಲಿ ಗುರು ನಿ
ಮ್ಮಡಿ ಮುರಾರಿಯ ತೋರಿಸುವಿರಾ
ದೊಡೆ ಕೃತಾರ್ಥನು ತಾನೆನುತ ಹಿಗ್ಗಿದನು ಮತ್ಸ್ಯ ನೃಪ || ೨೮ ||
1.11.29
ಪರಿಪರಿಯ ಪಾವುಡವ ಕಟ್ಟಿಸಿ
ಹರುಷದಲಿ ಬಿನ್ನಹದ ವೋಲೆಯ
ಬರೆಸಿದನು ವೇಗಾಯ್ಲ ದೂತರನಟ್ಟಿದನು ಭೂಪ |
ಚರರು ಪಯಣದ ಮೇಲೆ ಪಯಣದ
ಭರದಿ ಬಂದರು ಕೃಷ್ಣರಾಯನ
ಪುರಕೆ ಪರಿತೋಷದಲಿ ಹೊಕ್ಕರು ರಾಜ ಮಂದಿರವ || ೨೯ ||
1.11.29_13
ಪಾವುಡ= ಬಟ್ಟೆ- ಬಣ್ಣದ ಬಟ್ಟೆಗಳ ಬಾವುಟ
1.11.30
ಬರವ ಬಿನ್ನಹ ಮಾಡೆ ಪಡಿಹಾ
ರರು ಮುರಾರಿಯ ನೇಮದಲಿ ಚಾ
ರರನು ಹೊಗಿಸಲು ಬಂದು ಹೊಕ್ಕರು ಕೃಷ್ಣನೋಲಗವ |
ದರುಶನವ ಮಾಡುತ್ತ ಚರಣಾಂ
ಬುರುಹದಲಿ ಮೈಯಿಕ್ಕಿ ದೇವನ
ಹೊರೆಯಲಿಳುಹಿದರಿವರು ಕಳುಹಿದ ಬಿನ್ನವತ್ತಳೆಯ || ೩೦ ||
1.11.30_14
ಕೃಷ್ಣನಿಗೆ ದೂತರ ಮೂಲಕ ಪಾಂಡವರ ಕೊರಿಕೆ
1.11.30_15
ನಸುನಗುತ ಮುರವೈರಿ ಮಿಗೆ ಮ
ನ್ನಿಸಿದನವರನು ಪಾಂಡು ತನಯರ
ಕುಶಲವನು ದುರುಪದಿಯ ಸುಕ್ಷೇಮವನು ಬೆಸಗೊಳಲು
ಕುಶಲರನಿಬರು ಜೀಯ ಭಕ್ತ
ವ್ಯಸನ ಭಾರವು ನಿಮ್ಮಲಿರೆ ಜೀ
ವಿಸುವುದರಿದೇ ಪಾಂಡು ನಂದನರೆಂದರಾ ಚರರು ೩೧
1.11.32
ಕಳುಹಿದುಡುಗೊರೆ ಜೀಯ ನಿಮ್ಮಡಿ
ಗಳಿಗೆ ರಾಣೀವಾಸ ವರ್ಗಕೆ
ಬಲಗೆ ವಸುದೇವರಿಗೆ ದೇವಕಿಯುಗ್ರಸೇನರಿಗೆ |
ಕುಲ ಗುರುಗಳಕ್ರೂರನುದ್ಧವ
ಬಲುಭುಜನು ಕೃತವರ್ಮ ಸಾತ್ಯಕಿ
ಲಲಿತ ಸಾಂಬ ಕುಮಾರ ಕಂದರ್ಪಾನಿರುದ್ಧರಿಗೆ || ೩೨ ||
1.11.33
ಎನಲು ನಸುನಗೆಯಿಂದ ಕುಂತಿಯ
ತನುಜರಟ್ಟಿದ ಪಾವುಡಂಗಳ
ನನಿತುವನು ತೆಗೆಸಿದನು ಕೆಲದಲಿ ಸಂಧಿ ವಿಗ್ರಹಿಯ |
ದನುಜಹರನೀಕ್ಷಿಸಲು ಲಿಖಿತವ
ನನುನಯದೊಳಳವಡಿಸಿ ಬಿನ್ನಹ
ವೆನುತ ನೇಮವ ಕೊಂಡು ಕಳಕಳವಡಗೆ ವಾಚಿಸಿದ || ೩೩ ||
1.11.33_16
ಸ್ವಸ್ತಿ ದಾನವರಾಯಕುಂಜರ
ಮಸ್ತಕಾಂಕುಶ ಖೇಲನಾ ಪರಿ
ಯಸ್ತ ಯದುಕುಲ ಸಿಂಹ ಸಂಹೃತ ಜನ್ಮದುರಿತಭಯ
ಹಸ್ತಕಲಿತ ಸುದರುಶನೋರ್ಧ್ವಗ
ಭಸ್ತಿಲವಶಮಿತಾರ್ಕ ಪರಿವೃಢ
ವಿಸ್ತರಣ ಚಿತ್ತೈಸು ಕುಂತಿಯ ಸುತರ ಬಿನ್ನಪವ ೩೪
1.11.35
ದೇವ ನಿಮ್ಮಡಿಗಳ ಕೃಪಾ ಸಂ
ಜೀವನಿಯಲೆಮ್ಮಸುಗಳೊಡಲಿನ
ಠಾವ ಮೆಚ್ಚಿದವೊದೆದು ಹಾಯ್ದವು ವಿಪಿನ ಮಂದಿರವ |
ಈ ವರುಷದಜ್ಞಾತವಾಸ ಗ
ತಾವಶೇಷಣವಾಯ್ತು ಕಂಗಳಿ
ಗೀವುದವಯವ ದರುಶನಾಮೃತಪಾನ ಸಂಪದವ || ೩೫ ||
1.11.36
ದಾಟಿದೆವು ನುಡಿದವಧಿಯನು ವೈ
ರಾಟ ಪುರದಲಿ ತುರುವಿಡಿದು ಮೈ
ನೋಟಕೋಸುಗ ಬಂದು ನುಗ್ಗಾಯಿತ್ತು ಕುರುಸೇನೆ |
ತೋಟಿ ಜಯಿಸಿದೊಡೆಮ್ಮನರಿದು ವಿ
ರಾಟ ಮನ್ನಿಸಿ ತನ್ನ ಮಗಳ ಕಿ
ರೀಟಿ ತನಯಂಗೀವ ಭರವಿದೆ ದೇವರವಧರಿಸಿ || ೩೬ ||
1.11.37
ಮದುವೆಯೆಂಬುದು ನೆವ ನಿಜ ಶ್ರೀ
ಪದವ ತೋರಿಸಬೇಕು ವನ ವಾ
ಸದ ಪರಿಕ್ಲೇಶಾನು ಸಂತಾಪವನು ಬೀಳ್ಕೊಡಿಸಿ |
ಕದಡು ಹೋಗಲು ಕಾಣಬೇಹುದು
ಹದುಳವಿಟ್ಟೆಮಗುಚಿತ ವಚನದ
ಹದವಳೆಯಲುತ್ಸಾಹಸಸಿಯನು ದೇವ ಸಲಹುವುದು || ೩೭ ||
1.11.38
ಕರುಣಿ ಬಿಜಯಂಗೈದು ಭಕ್ತರ
ಹೊರೆಯ ಬೇಹುದು ಬೇಡಿಕೊಂಬೆನು
ಅರಸಲೇಕೆಳೆಗಂದಿ ತಾಯ್ತಾನರಸುವಂದದಲಿ |
ಚರಣಭಜಕ ಕುಟುಂಬನೆಂಬೀ
ಬಿರುದ ಪಾಲಿಸಿ ಬಿನ್ನಹವನವ
ಧರಿಸಿ ಕಾಣಿಸಿ ಕೊಡುವುದೆಮಗೆ ಮಹಾ ಪ್ರಸಾದವನು || ೩೮ ||
1.11.39
ಕೇಳಿ ಹರುಷಿತನಾಗಿ ಕಡು ಕರು
ಣಾಳು ಹೊಂಪುಳಿಯೋಗಿ ಭಕ್ತರ
ಮೇಲಣೊಲವಿನ ಬಹಳ ಪರಮ ಸ್ನೇಹ ಪಸರಿಸಿತು |
ಕೇಳಿದೆವೆ ಹರ ಹರ ಯುಧಿಷ್ಠಿರ
ನೇಳಿಗೆಯನಾ ಕೌರವೇಶ್ವರ
ನೂಳಿಗವನೆನುತಸುರರಿಪು ನೋಡಿದನು ಕೆಲಬಲನ || ೩೯ ||
1.11.40
ಚಿಂತೆ ಬೀತುದು ಪಾಂಡು ಮಾವನ
ಸಂತತಿಗಳಜ್ಞಾತ ವಾಸವ
ನೆಂತು ಪಂಥದ ಮೇಲೆ ಕಳೆದರೊ ನಮ್ಮ ಪುಣ್ಯವಿದು |
ಕುಂತಿ ದೇವಿಯರುಮ್ಮಳಿಸೆ ನಾ
ವೆಂತು ಬದುಕುವೆವಕಟೆನುತ್ತ ನಿ
ರಂತರವು ಮರುಗುವನು ಬೊಪ್ಪನು ಶಿವ ಶಿವಾಯೆಂದ || ೪೦ ||
1.11.41
ಭವಣಿಗೆಯ ಬಂದಡವಿಯಲಿ ಪಾಂ
ಡವರು ನವೆದರು ರಾಜ್ಯವನು ಯಾ
ದವರು ನಾವನುಭವಿಸುತಿದ್ದೆವು ನವೆದರಿನ್ನಬರ |
ಅವರ ಸೊಗಸೇ ನಮ್ಮ ಸೊಗಸುಗ
ಳವರ ದುಗುಡವೆ ನಮ್ಮದದರಿಂ
ದವರ ವಿಮಳಾಭ್ಯುದಯ ನಮಗೆಂದಸುರರಿಪು ನುಡಿದ || ೪೧ ||
1.11.42
ಕಾಲ ಕೈಗೂಡುವೊಡೆ ಲೇಸಿನ
ಮೇಲೆ ಲೇಸುಗಳೊದಗುವವು ಭೂ
ಪಾಲ ಕುಂತಿಯ ಸುತರ ಬೆಳವಿಗೆ ಮೊದಲ ಮಂಗಳವು |
ಮೇಲೆ ತಂಗಿಯ ಮಗನ ಮದುವೆ ವಿ
ಶಾಲ ಸುಖವದು ನಿಖಿಳ ಯಾದವ
ಜಾಲ ಪಯಣವ ಮಾಡಲೆಂದಸುರಾರಿ ನೇಮಿಸಿದ || ೪೨ ||
1.11.42_17
ಉಪಪ್ಲಾವ್ಯ (ಮತ್ಸ್ಯ) ನಗರಿಗೆ ಕೃಷ್ಣನ ಆಗಮನ
1.11.43
ಚರರಿಗುಡುಗೊರೆ ಗಂಧ ನಿಖಿಲಾ
ಭರಣ ಕತ್ತುರಿ ಕರ್ಪುರವನಿ
ತ್ತರಿದಿಶಾಪಟ ಬೀಳುಗೊಟ್ಟನು ರಾಯಸವ ಬರೆಸಿ |
ಮರಳಿ ದೂತರು ಬಂದು ಮತ್ಸ್ಯನ
ಪುರವ ಹೊಕ್ಕರು ಕೃಷ್ಣರಾಯನ
ಕರುಣದಳತೆಯ ಬಿನ್ನವಿಸಿದರು ಪಾಂಡು ತನಯರಿಗೆ || ೪೩ ||
1.11.43_18
ಬಳಿಕ ಸುಮುಹೂರ್ತದಲಿ ಮತ್ಸ್ಯನ
ಹೊಳಲ ಹೊರವಂಟುತ್ತರ ದಿಶಾ
ವಳಯದಲಿ ರಚಿಸಿದರುಪಪ್ಲವ್ಯಾಖ್ಯ ಪುರವರವ
ನೆಲನಗಲದಲಿ ಕಟ್ಟಿ ಕೇರಿಯ
ನಳವಡಿಸಿದರು ನಿಖಿಳ ನೃಪರಿಗೆ
ಬಳಿಯನಟ್ಟಿದನುತ್ತರೋತ್ತರವಾದುದಿವರುದಯ ೪೪
1.11.45
ಜೋಳಿ ಹರಿದವು ನಿಖಿಳ ರಾಯರಿ
ಗೋಲೆಯುಡುಗೊರೆಯಿಕ್ಕಿದವು ಪಾಂ
ಚಾಲಪತಿ ಹೊರವಂಟ ಮೂರಕ್ಷೋಣಿ ಬಲ ಸಹಿತ ||
ನೀಲನು ಯುಧಾಮನ್ಯು ಸಮರ ಕ
ರಾಳ ಧೃಷ್ಟದ್ಯುಮ್ನ ಕೀರ್ತಿ ವಿ
ಶಾಲ ಧೀರ ಶಿಖಂಡಿ ಸಹಿತಾ ದ್ರುಪದನೈತಂದ || ೪೫ ||
1.11.46
ಇದಿರುಗೊಂಡರು ಹರುಷದಲಿ ದುರು
ಪದಿಯ ಬಾಂಧವ ಪೈಕವನು ಮಿಗೆ
ಮುದದಿ ಕಾಣಿಸಿಕೊಂಡರಖಿಳ ಮಹಾ ಮಹೀಶ್ವರರ |
ಒದಗಿತಖಿಳಕ್ಷೋಹಿಣಿ ಬಲ ಸಂ
ಪದವನುನ್ನತ ವಸ್ತುಗಳ ಸೊಂ
ಪೊದವಿದವು ಕೈಗೈದು ಮದುವೆಯ ಮಂಗಳಾಭ್ಯುದಯ || ೪೬ ||
1.11.47
ದೇವನೀ ಬಹನೆಂದು ಬಂದರು
ದಾವಣಿಯ ಹವಣರಿದು ಬಳಿಕ ಮ
ಹಾ ವಿಳಾಸದಳೊಪ್ಪವಿಟ್ಟರು ತಮ್ಮ ನಗರಿಗಳ |
ಹೂವಲಿಯ ವೀಧಿಗಳ ನವ ರ
ತ್ನಾವಳಿಯ ಸೂಸಕದ ಭದ್ರದ
ಲೋವೆಗಳ ಲಂಬಳದಲೆಸೆದವು ಕೇರಿ ಕೇರಿಗಳು || ೪೭ ||
1.11.47_19
ದೇವನು (ಕೃಷ್ನನು)+ ಈ ಬಹನೆಂದು ಬಂದರು ದಾವಣಿಯ (ದವಣ= ಬದ್ದಣ,ಮೆರವಣಿಗೆ? ಮದವಣಿಗ- ದೇವ ಕೃಷ್ಣ - ದಾವಣಿ= ದನ ಕಟ್ಟುವ ಹಗ್ಗ?) ಹವಣ(ಕಟ್ಟಳೆ, ಸಮಯ)+ ಅರಿದು (ತೀಳಿದು), ಬಳಿಕ ಮಹಾ ವಿಳಾಸದಳು (ವಿಜೃಂಬಣೆ)+ ಒಪ್ಪವಿಟ್ಟರು ತಮ್ಮ ನಗರಿಗಳ ಹೂವಲಿಯ ವೀಧಿಗಳ (ಬೀದಿ) ನವ ರತ್ನಾವಳಿಯ ಸೂಸಕದ ಭದ್ರದ ಲೋವೆಗಳ ಲಂಬಳದಲಿ (ಲಂಬ- ಲಂಬವಾಗಿ- ಅಂಕುಡೊಂಕಿಲ್ಲದೆ)+ ಎಸೆದವು ಕೇರಿ ಕೇರಿಗಳು.
1.11.48
ಚಾರುತರ ಕತ್ತುರಿಯ ಸಾದಿನ
ಸಾರಣೆಯ ಕುಂಕುಮದ ರಸಗಳ
ಕಾರಣೆಯ ನವಚಿತ್ರಪತ್ರದ ಬಹಳ ಭಿತ್ತಿಗಳ |
ಓರಣದ ಬೀದಿಗಳ ತಳಿಗೆಯ
ತೋರಣದ ಹೊಂಜಗುಲಿಗಳ ಪ
ನ್ನೀರ ಚಳೆಯದ ರಚನೆಯಲಿ ಮನೆ ಮನೆಗಳೊಪ್ಪಿದವು || ೪೮ ||
1.11.49
ಕಟ್ಟಿದವು ಗುಡಿ ಮನೆಗಳಲಿ ಮೇ
ಲ್ಕಟ್ಟು ಬಿಗಿದವು ಪುರದ ನಾರಿಯ
ರುಟ್ಟು ತೊಟ್ಟರು ಕಳಶ ಕನ್ನಡಿ ಸಹಿತ ದೇಶಿಯಲಿ |
ಇಟ್ಟಣಿಸಿ ಗಜ ವಾಜಿ ರಥ ಸಾ
ಲಿಟ್ಟು ತೋರುವ ದನುಜರಾಯ ಘ
ರಟ್ಟನನು ನಡೆದಿದಿರುಗೊಂಡರು ಪಾಂಡು ನಂದನರು || ೪೯ ||
1.11.50
ಕಳಶ ಕನ್ನಡಿ ವಾದ್ಯರವ ಮಂ
ಗಳ ಮಹಾಂಬುಧಿ ಮಸಗಿದವೊಲು
ಜ್ವಲ ಪತಾಕಾವಳಿಯ ವಿಮಳಚ್ಛತ್ರ ಚಾಮರದ |
ಹೊಳೆವ ಕಂಗಳ ಮುಖದ ಕಾಂತಿಯ
ಮೊಲೆಗಳೊಡ್ಡಿನ ಮಂದ ಗಮನದ
ತಳಿದ ಮುಸುಕಿನ ಮೌಳಿಕಾತಿಯರೈದಿತೊಗ್ಗಿನಲಿ || ೫೦ ||
1.11.50_20
right|thumb|200x200px| ಜನಪದ ನರ್ತಕರು ಚಾಮರ ಬೀಸುತ್ತಾ ನರ್ತಿಸುದ್ದಾರೆ
1.11.51
ಹೊಳಹು ಮಿಗೆ ದೂರದಲಿ ಗರುಡನ
ಹಳವಿಗೆಯ ಕಂಡಂದಣಂಗಳ
ನಿಳಿದು ಮೈಯಿಕ್ಕಿದರು ದ್ರುಪದ ವಿರಾಟ ಪಾಂಡವರು |
ಬಳಿಕ ಭೂಪರು ಕಾಲು ನಡೆಯಲಿ
ನಲಿದು ಬರುತಿರಲಾನೆಯಿಂದಿಳೆ
ಗಿಳಿದು ಬಿಜಯಂಗೈದನಸುರಾರಾತಿ ಕರುಣದಲಿ || ೫೧ ||
1.11.52
ಇತ್ತನವರಿಗೆ ಸಮಯವನು ದೇ
ವೋತ್ತಮನು ನಿಗಮೌಘವರಸಿದ
ಡತ್ತಲಿತ್ತಲು ಸರಿವ ಮುನಿಗಳ ಮನಕೆ ಮೈಗೊಡದ |
ಹೆತ್ತ ಮಕ್ಕಳು ನಿಲಲಿ ಭಕ್ತರ
ನಿತ್ತ ಕರೆ ನೆನೆವರಿಗೆ ತನ್ನನು
ತೆತ್ತು ಬದುಕುವೆನೆಂಬ ಬೋಳೆಯರರಸ ನಡೆತಂದ || ೫೨ ||
1.11.53
ಬಲದ ಪದಘಟ್ಟಣೆಯ ರಜದಿಂ
ಬೆಳುಪಡಗಿದಂಬರದ ಮಾರ್ಗದ
ಝಳದ ಕಿರುಬೆಮರುಗಳ ಲಲಿತ ಕಪೋಲ ಮಂಡಲವ |
ಕೆಲದ ಪಾಯವಧಾರುಗಳ ಕಳ
ಕಳದ ಕರುಣಾರಸವ ಸೂಸುವ
ಮೆಲುನಗೆಯ ಸಿರಿಮೊಗದ ಕೃಷ್ಣನ ಕಂಡುದಾ ಸೇನೆ || ೫೩ ||
1.11.54
ಬಾಗಿದವು ಬರಿಕೈಗಳನು ಹಣೆ
ಗಾಗಿ ಮುರುಹಿದವಾನೆಗಳು ತಲೆ
ವಾಗಿ ಗುಡಿಗಟ್ಟಿದವು ಹೇಷಾರವದ ತೇಜಿಗಳು |
ತೂಗಿ ತನುವನು ಪುಳಕದಲಿ ಮನ
ಲಾಗು ಮಿಗೆ ಮೈಮರೆದು ಹರುಷದ
ಸಾಗರದಲೋಲಾಡುತಿರ್ದುದು ಕೂಡೆ ತಳತಂತ್ರ || ೫೪ ||
1.11.55
ಅಂಗನೆಯರರವಿಂದನಾಭನ
ಮಂಗಳ ಶ್ರೀಮೂರ್ತಿ ಸುಧೆಯನು
ಕಂಗಳಲಿ ಕುಡಿಕುಡಿದು ಪಡೆಯರು ಮತ್ತೆ ದಣಿವುಗಳ |
ಅಂಗಜನ ಪೆತ್ತಯ್ಯ ನೀ ರೂ
ಹಿಂಗೆ ಬಡವನೆಯೆನುತ ಮುರಹರ
ನಂಗ ಶೋಭೆಯ ಬಂದಿಯಲಿ ಸಿಲುಕಿತ್ತು ಸತಿನಿವಹ || ೫೫ ||
1.11.56
ಎರಡು ಸೇರೆಯ ತುಂಬಿ ರತ್ನವ
ಸುರಿದು ಮೈಯಿಕ್ಕಿದನು ಭೂಪತಿ
ಚರಣದಲಿ ಚತುರಾಸ್ಯಜನಕನ ವಿಮಳಭಕ್ತಿಯಲಿ |
ನರ ವೃಕೋದರ ನಕುಲ ಸಹದೇ
ವರು ವಿರಾಟ ದ್ರುಪದ ಮೊದಲಾ
ಗಿರೆ ಸಮಸ್ತ ನೃಪಾಲಕರು ಮೈಯಿಕ್ಕಿತೊಗ್ಗಿನಲಿ || ೫೬ ||
1.11.57
ಶಿರವ ನೆಗಹಿ ಯುಧಿಷ್ಠಿರನ ಮೈ
ಮುರಿಯಲೀಯದೆ ಕೃಷ್ಣನಪ್ಪಿದ
ನುರುತರ ಪ್ರೇಮದಲಿ ಭೀಮಾರ್ಜುನರ ಯಮಳರನು |
ಹರುಷದಲಿ ತೆಗೆದಪ್ಪಿ ಭೂಮೀ
ಶ್ವರರ ಮನ್ನಿಸಿದನು ವಿಳಾಸಿನಿ
ಯರ ವಿಡಾಯಿಯಲರಸಿ ಕಂಡಳು ಬಂದು ಮುರಹರನ || ೫೭ ||
1.11.58
ಕಾಣಿಕೆಯ ಕೈಕೊಂಡು ರಾಯನ
ರಾಣಿಯನು ಮನ್ನಿಸಿದ ತನ್ನಯ
ರಾಣಿವಾಸದ ಹೊರಗೆ ನೇಮವ ಕೊಟ್ಟು ಕಳುಹಿದನು |
ರಾಣಿ ರುಕುಮಿಣಿಯಾದಿಯಾದ
ಕ್ಷೋಣಿಧರನರಸಿಯರನನಿಬರ
ಕಾಣಿಕೆಯ ಕೊಟ್ಟೆರಗಿ ದುರುಪದಿ ಕಂಡಳೊಲವಿನಲಿ || ೫೮ ||
1.11.58_21
ವಸುದೇವ ದೇವಕಿಯರಿಗೆ ಸತ್ಕಾರ
1.11.59
ದರುಶನವನೊಲಿದಿತ್ತು ವಸುದೇ
ವರನು ದೇವಕಿ ದೇವಿಯರ (ಪಾ- ದೇವಕಿಯರ) ಸಂ |
ಕರುಷಣನ ಮಹದುಗ್ರಸೇನನ ಕಂಡನವನೀಶ
ವರ ಸುಭದ್ರಾದೇವಿ ಭಾವಂ
ದಿರಿಗೆ ವಂದಿಸಿದಳು ಕುಮಾರನು
ಹರುಷದಲಿ ಬಿಗಿಯಪ್ಪಿದನು ಅಭಿಮನ್ಯು ಪಾಂಡವರ || ೫೯ ||
1.11.59_22
ಈ ಪದ್ಯದ ಬಂಧದಲ್ಲಿ ತೊಡಕಿದೆ.
1.11.60
ಕೈದಣಿಯೆ ವಸುದೇವನಳಿಯನ
ಮೈದಡವಿದನು ಮಗನೆ ಬನದೊಳ
ಗೊಯ್ದು ವಿಧಿ ಬಂಧಿಸಿತಲಾ ಸಾಕಿನ್ನು ದೈವವನು |
ಬೈದು ಮಾಡುವುದೇನು ದುರುಪದಿ
ಯೈದೆತನವುಂಟಾಗಿ ದುರಿತವ
ಕೊಯ್ದು ನರಲೋಕಕ್ಕೆ ಬಂದಿರಿ ನಮ್ಮ ಪುಣ್ಯದಲಿ || ೬೦ ||
1.11.61
ಅರಸಿಯೈದೆತನಕ್ಕೆ ನಮ್ಮೈ
ವರ ನಿಜಾಯುಷ್ಯಕ್ಕೆ ರಾಜ್ಯದ
ಸಿರಿಯ ಸೊಂಪಿಗೆ ನಿಮ್ಮ ಮಗನೀ ಕೃಷ್ಣ ಹೊಣೆ ನಮಗೆ |
ಸುರರು ಸರಿಯಿಲ್ಲೆಮಗೆ ಮಿಕ್ಕಿನ
ನರರು ಗಣ್ಯವೆ ಮಾವ ಕೇಳೆಂ
ದರಸ ವಸುದೇವನನು ಮಧುರೋಕ್ತಿಯಲಿ ಮನ್ನಿಸಿದ || ೬೧ ||
1.11.62
ತಂದೆ ಬೇಡೆಮಗವ್ವೆ ಬೇಡೆಮ
ಗಿಂದುಮುಖಿಯರನೊಲ್ಲೆವಾವ್ ಮನ
ಸಂದು ಮೆಚ್ಚಿಹೆವೆಮ್ಮ ಭಕ್ತರಿಗೆಂಬನನವರತ |
ನೊಂದೆನೆಂಬನು ತನ್ನವರು ಮನ
ನೊಂದರಾದೊಡೆ ತನ್ನವರ ಸುಖ
ವಿಂದು ತನ್ನದದೆಂಬುದೇ ಸಿರಿಕೃಷ್ಣ ಮತವೆಂದ || ೬೨ ||
1.11.63
ಅರಸಿಯರ ಬಗೆಗೊಳ್ಳ ಮಕ್ಕಳ
ಸರಕು ಮಾಡನು ದೇಶ ಕೋಶದ
ಸಿರಿಯ ಗಣಿಸನು ಖಡ್ಡಿಗೊಳ್ಳನು ಗಾಢಗರ್ವಿತರ |
ಹರಿ ಪರಾಯಣರೆಂದೊಡವರಿಗೆ
ಹರಹಿಕೊಂಬನು ಮಗನ ಶೀಲವು
ನರರ ಪರಿಯಲ್ಲೆಂದನಾ ವಸುದೇವನಳಿಯಂಗೆ || ೬೩ ||
1.11.63_23
ಲೋಗರೇ ನೀವೆಮಗೆ ನಿವಗರ
ಗಾಗಿ ಕರಗುವನದು ನಿಲಲಿ ತನ
ಗಾಗದವರಿಗೆ ತನ್ನ ತೆರುವನು ಕೊಲುವ ಹಗೆಗೊಲಿವ
ಲೋಗರೆನ್ನವರೆಂದು ಲೋಗರಿ
ಗಾಗಿ ಬದುಕುವೆನೆಂಬ ಬಲುಗೈ
ಚಾಗಿ ಕೃಷ್ಣನನೇನ ಹೇಳುವೆನೆಂದನರಸಂಗೆ ೬೪
1.11.65
ಬೊಪ್ಪನವರೇಯೆಮ್ಮ ದೂರದೆ
ಯಿಪ್ಪವರು ತಾವಲ್ಲ ಸಾಕಿ
ನ್ನೊಪ್ಪದಲಿ ಬಾಯೆಂದು ಮುರರಿಪು ಕರೆದನವನಿಪನ |
ಚಪ್ಪರಿಸಿ ಕೌರವರು ತುರುಗಳ
ತಪ್ಪಿಸಿದುದೇನಾಯ್ತು ಪಾರ್ಥನ
ದರ್ಪದನುವೆಂತೆಂದು ಬೆಸಗೊಂಡನು ಮುರಧ್ವಂಸಿ || ೬೫ ||
1.11.66
ಹೂಹೆಗೆಲ್ಲಿಯ ದರ್ಪ ಮನುಜನ
ಸಾಹಸವು ಬೇರೇನು ಯಂತ್ರದ
ಹಾಹೆ ಯಂತ್ರವನುಳಿದು ಜೀವಿಸಲರಿವುದೇ ಬೇರೆ |
ದೇಹಿ ನೀ ನಾವೆಲ್ಲ ನಿನ್ನಯ
ದೇಹವಿದರೊಳಗೆಮಗೆ ಗರ್ವದ
ಗಾಹಿದೆಲ್ಲಿಯದೆಂದು ಬಿನ್ನವಿಸಿದನು ಯಮಸೂನು || ೬೬ ||
1.11.67
ಎಸಳು ಮೊನೆಯೊಂದಾಗಿ ತಾವರೆ
ಮುಸುಕುತಿದೆ ನೈದಿಲೆಯ ನೆತ್ತಿಯ
ಬೆಸುಗೆ ಬಿಡುತಿದೆ ಜಕ್ಕವಕ್ಕಿಯ ತೆಕ್ಕೆ ಸಡಿಲುತಿದೆ |
ದೆಸೆದೆಸೆಯ ತಾಣಾಂತರದ ಹೊಂ
ಬಿಸಿಲು ಬೀತುದು ಜೀಯ ಬಿನ್ನಹ
ವಸುಧೆ ತಂಪೇರಿತ್ತು ಸಂಧ್ಯಾ ಸಮಯವಾಯ್ತೆಂದ || ೬೭ ||
1.11.68
ನಗುತ ಹರಿ ನಿಂದಿರಲು ಕೈ ದಂ
ಡಿಗೆಯವರು ಹೊದ್ದಿದರು ರೂವಾ
ರಿಗೆಗೆ ಬಿಜಯಂಗೈದನುಘೆಯೆಂದುದು (ಪಾ- ಬಿಜಯಂಗೈದನುಘೇಯೆಂದುದು) ಸುರಸ್ತೋಮ |
ಬಿಗಿದ ದಡ್ಡಿಯ ಬದ್ದರದ ಬೀ
ಯಗದ ರಾಣೀವಾಸದಂದಣ
ತೆಗೆದು ನಡೆದುದು ಮುಂದೆ ಸಂತೋಷದಲಿ ಯದುಸೇನೆ || ೬೮ ||
1.11.69
ಹೊಕ್ಕನಸುರಾರಾತಿ ಪಾಂಡವ
ರಿಕ್ಕೆಲದಿ ಬರೆ ನಗರಜನ ಮೈ
ಯಿಕ್ಕಿ ಬೀದಿಯ ಧೂಳು ಕವಿದುದು ಮುಂದೆ ಸಂದಣಿಸಿ |
ಹೊಕ್ಕು ಹೊಗಳುವ ಸುತಿಗಳಿಗೆ (ಸ್ತುತಿಗಳಿಗೆ?) ಕೈ
ಮಿಕ್ಕ ಕಳ್ಳನು ಪಾಂಡು ಸುತರಿಗೆ
ಸಿಕ್ಕಿದನು ಶಿವಯೆನುತಲಿರ್ದುದು ಸೂರಿ ಸಂದೋಹ || ೬೯ ||
1.11.70
ಮೇಲೆ ಬೀಳುವ ಮಂದಿಯನು ಕೈ
ಗೋಲಿನವರಪ್ಪಳಿಸೆ ಲಕ್ಷ್ಮೀ
ಲೋಲನವದಿರ ಜರೆದು ಕಾಣಿಸಿಕೊಳುತ ಪುರಜನವ |
ಮೇಲು ನೆಲೆಯುಪ್ಪರಿಗೆಗಳ ವರ
ಬಾಲೆಯರ ಕಡೆಗಂಗಳೆಸೆವ ನಿ
ವಾಳಿಗಳ ಕೈಕೊಳುತ ಹೊಕ್ಕನು ರಾಜಮಂದಿರವ || ೭೦ ||
1.11.70_24
ಕೃಷ್ಣನ ಓಲಗ/ಸಭೆ
1.11.71
ಹಿಡಿದರಾರತಿಗಳನು ಬಣ್ಣದ
ಸೊಡರು ಸುಳಿದವು ಮುಂದೆ ನೆಲನು
ಗ್ಗಡಿಪ ಭೀಮಾರ್ಜುನರ ಮೇಳಾಪದಲಿ ಹರುಷದಲಿ |
ಹಿಡಿದ ಕೈದೀವಿಗೆಗಳನು ಕೈ
ದುಡುಕಿ ತಿವಿದಾಡುತ್ತ ಕಾಂತಿಯ
ಕಡಲ ಮಣಿಮಯ ಪೀಠದಲಿ ಮಂಡಿಸಿದನಸುರಾರಿ || ೭೧ ||
1.11.72
ಬೀಳುಗೊಟ್ಟನು ಸಕಲ ಭೂಮೀ
ಪಾಲರನು ಕುಂತಿಯ ಕುಮಾರರ
ಮೇಳದಲಿ ಪರಿಮಿತದಲಸುರಾರಾತಿ ನಸು ನಗುತ ||
ಸೋಲದಲಿ ಮೈದಣಿದು ಕುರು ಭೂ
ಪಾಲನುಚಿತವ ಮಾಡಿ ರಾಜ್ಯವ
ನಾಳಿಸುವ ಹದನುಂಟೆ ನಿಮ್ಮಾಳಾಪವೇನೆಂದ || ೭೨ ||
1.11.73
ಮರಳಿದವು ತುರುವಿತ್ತಲಹಿತರು
ಸರಿದರತ್ತಲು ಮತ್ಸ್ಯನೆಮ್ಮೈ
ವರನು ನಾವೆಂದರಿದು ಕೊಂಡಾಡಿದನು ವಿನಯದಲಿ |
ವರ ಸುಭದ್ರಾ ನಂದನಂಗು
ತ್ತರೆಯನೀವರ್ಥಿಯಲಿಯಿರಲಾ(ವು)
ಕರೆಯಲಟ್ಟಿದೆವೆಂದು ಬಿನ್ನವಿಸಿದನು ಭೂಪಾಲ || ೭೩ ||
1.11.73_25
ಹಿಡಿದರಾರತಿಗಳನು ಬಣ್ಣದ
ಸೊಡರು ಸುಳಿದವು ಮುಂದೆ ನೆಲನು
ಗ್ಗಡಿಪ ಭೀಮಾರ್ಜುನರ ಮೇಳಾಪದಲಿ ಹರುಷದಲಿ |
ಹಿಡಿದ ಕೈದೀವಿಗೆಗಳನು ಕೈ
ದುಡುಕಿ ತಿವಿದಾಡುತ್ತ ಕಾಂತಿಯ
ಕಡಲ ಮಣಿಮಯ ಪೀಠದಲಿ ಮಂಡಿಸಿದನಸುರಾರಿ || ೭೧ ||
1.11.73_26
ಬೀಳುಗೊಟ್ಟನು ಸಕಲ ಭೂಮೀ
ಪಾಲರನು ಕುಂತಿಯ ಕುಮಾರರ
ಮೇಳದಲಿ ಪರಿಮಿತದಲಸುರಾರಾತಿ ನಸು ನಗುತ ||
ಸೋಲದಲಿ ಮೈದಣಿದು ಕುರು ಭೂ
ಪಾಲನುಚಿತವ ಮಾಡಿ ರಾಜ್ಯವ
ನಾಳಿಸುವ ಹದನುಂಟೆ ನಿಮ್ಮಾಳಾಪವೇನೆಂದ || ೭೨ ||
1.11.73_27
ಮರಳಿದವು ತುರುವಿತ್ತಲಹಿತರು
ಸರಿದರತ್ತಲು ಮತ್ಸ್ಯನೆಮ್ಮೈ
ವರನು ನಾವೆಂದರಿದು ಕೊಂಡಾಡಿದನು ವಿನಯದಲಿ |
ವರ ಸುಭದ್ರಾ ನಂದನಂಗು
ತ್ತರೆಯನೀವರ್ಥಿಯಲಿಯಿರಲಾ(ವು)
ಕರೆಯಲಟ್ಟಿದೆವೆಂದು ಬಿನ್ನವಿಸಿದನು ಭೂಪಾಲ || ೭೩ ||
1.11.74
ಕೊಳುಗೊಡೆಗೆ ಸೇರುವರೆ ಮದುವೆಯ
ನೊಲಿದು ದೇವರು ಮಾಡುವುದು ಮೇ
ಲಿಳೆಯ ಕಾರ್ಯವ ಬುದ್ಧಿಗಲಿಸುವದೆಮ್ಮನುದ್ಧರಿಸಿ |
ಬಳಿಕ ಬಿಜಯಂಗೈವುದಿದು ಹದ
ನೆಲೆ ದಯಾಂಬುಧಿ ಕೇಳೆನಲು ನೃಪ
ತಿಲಕನುಚಿತದ ಬಿನ್ನಹಕೆ ಮನವೊಲಿದು ಹರಿ ನುಡಿದ || ೭೪ ||
1.11.75
ಕೊಳುಗೊಡೆಗೆ ತಪ್ಪೇನು ವಸುವಿನ
ಕುಲ ವಿರಾಟನು ಇಂದು ವಂಶಾ
ವಳಿಯವರು ನೀವಾಭಿಜಾತ್ಯದೊಳಿಲ್ಲ ಹಳಿವುಗಳು |
ಒಳನುಡಿಗಳಲಿ ದೈವ ಶಕುನಾ
ವಳಿಗಳಾದೊಡೆ ಹರುಷದಲಿ ಮಂ
ಗಳ ಮುಹೂರ್ತವ ಮಾಡಿಯೆಂದನು ಕೃಷ್ಣ ನಸುನಗುತ || ೭೫ ||
1.11.75_28
ಅಭಿಮನ್ಯುವಿನ ವಿವಾಹ
1.11.75_29
ಒಸಗೆಯಲಿ ನಿಸ್ಸಾಳ ತತಿ ಗ
ರ್ಜಿಸಿದವಖಿಳ ಜನಂಗಳುತ್ಸಾ
ಹಿಸಿತು ಕನ್ಯಾವರಣವಾಯಿತು ವೈದಿಕೋಕ್ತಿಯಲಿ
ಎಸೆಯಲಭಿಮನ್ಯುವನು ಸಿಂಗಾ
ರಿಸಿತು ಯದು ಪಾಂಚಾಲ ಮತ್ಸ್ಯ
ಪ್ರಸರದಲಿ ಮೆಟ್ಟಕ್ಕಿ ಜೀರಿಗೆ ಬೆಲ್ಲವನುವಾಯ್ತು ೭೬
ಒಸಗೆ:- ಅರಿವು, ತಿಳುವಳಿಕೆ, ಸುದ್ದಿ, - ೧ ಶುಭ, ಮಂಗಳಕಾರ್ಯ ೨ ಕಾಣಿಕೆ, ಉಡುಗೊರೆ ೩ ನಿಷೇಕ, ಪ್ರಸ್ತ ೪ ಸಂತೋಷ ೫ ಆಹ್ವಾನ
1.11.75_30
ವರ ಮುಹೂರ್ತದ ಘಳಿಗೆವಟ್ಟಲ
ಭರಿತದೊಳು ಪುಣ್ಯಾಹವದ ವಿ
ಸ್ತರದಲಕ್ಷತೆ ತಳಿದು ತಂದರು ವಿಮಲ ಮಂಟಪಕೆ
ಪರಮ ಋಷಿಗಳ ಹೋಮದಲಿ ಶಿಖಿ
ವರನ ಬಲಗೊಂಡರು ಕುಮಾರಿಯ
ವರಿಸೆ ವೈದಿಕದಿಂದ ಬಂದಳು ವರನ ವಾಮದಲಿ ೭೭
1.11.78
ವಿಭವವೈವಡಿಯಾಗೆ ಸದ್ವಿಜ
ಸಭೆಯನಾರಾಧಿಸಿದನವನೀ
ವಿಭುಗಳಿತ್ತರು ಮುಯ್ಗಳುಡುಗೊರೆ ರತ್ನ ಭೂಷಣವ |
ಅಭವ ಸನ್ನಿಭ ವೀರನಾಗೆಂ
ದಿಭಗಮನೆಯರು ಕೃಷ್ಣನರಸಿಯ
ರಭಿಜನಾಮಲ ತಿಲಕನನು ಹರಸಿದರು ಹರುಷದಲಿ || ೭೮ ||
1.11.79
ಇದು ಶುಭೌಘದ ಗರುಡಿ ಬಹು ಸಂ
ಪದದ ನೆಲೆಮನೆ ಸೊಂಪಿನಾಗರ
ವಿದು ಪರಾನಂದ ಪ್ರವಾಹದ ಜನ್ಮಭೂಮಿಯಿದು ||
ಮುದದ ಕೇಳೀಸ್ಥಾನ ವಿಮಲಾ
ಭ್ಯುದಯದೋಲಗಶಾಲೆ ಲಕ್ಷ್ಮೀ
ಸದನವೆನೆ ರಂಜಿಸಿದುದಭಿಮನ್ಯುವಿನ ವೈವಾಹ || ೭೯ ||
1.11.80
ಯಾದವರು ಪಾಂಚಾಲ ಮತ್ಸ್ಯರು
ಮೇದಿನೀಪತಿ ಪಾಂಡು ಸೋಮಕ
ರಾದಿಯಾದನ್ವಯವನಗಣಿತ ಬಂಧು ಬಳಗವನು |
ಆದರಿಸಿದನು ವಿನಯದಲಿ ವಿ
ತ್ತಾದಿ ಸತ್ಕಾರದಲಿ ದಣಿದುದು
ಮೇದಿನೀಜನವವನಿಪನ ಸನ್ಮಾನ ದಾನದಲಿ || ೮೦ ||
1.11.80_31
ವರ ಚತುರ್ಥಿಯೊಳಿರುಳು ಮೆರೆದರು
ಪುರದಲುತ್ಸಾಹದಲಿ ದಂಪತಿ
ವರರು ಭೂಮೀಚಾರ ಚಮರದ ಚಾತುರಂಗದಲಿ
ಮರುದಿವಸವವಭೃತವ ನೆರೆ ವಿ
ಸ್ತರಿಸಿದರು ಪನ್ನೀರ ಹೊಂಗೊ
ಪ್ಪರಿಗೆಗಳ ಕುಂಕುಮದ ಘಟವಾಸಕದ ರಚನೆಯಲಿ ೮೧
1.11.82
ಕನಕ ಮಣಿಗಳ ತೊಟ್ಟು ಜಾಜಿಯ
ನನೆಯ ಆದಳಿಕೆಯಲಿ ಮದನನ
ಮೊನೆಯ ಖಾಡಾಖಾಡಿ ಖಾತಿಯರೈದೆ ಹೊಯ್ ಹೊಯ್ದು |
ದನುಜಹರನರಸಿಯರು ಕುಂತಿಯ
ತನಯರರಸಿಯರೊಡನೆ ಮತ್ಸ್ಯನ
ವನಿತೆಯರು ಪಾಂಚಾಲಿನಿಯರೋಕುಳಿಯನಾಡಿದರು || ೮೨ ||
1.11.83
ಧರಣಿ ನೆನೆದುದು ಗಂಧ ರಸ ಕ
ತ್ತುರಿಯ ಪನ್ನೀರುಗಳ ಹೊನಲೊಡೆ
ವೆರಸಿ ದೆಸೆ ಕಂಪಿಟ್ಟುದಂಬುಧಿ ನವ ತುಷಾರದಲಿ |
ತರಣಿ ಪರಿಮಳಿಸಿದನು ಪವನನ
ಸುರಭಿತನವಚ್ಚರಿಯೆ ಗಗನದ
ಪರಮ ಸೌರಭಕಲಸಿ ಕೊಂಡುದು ಸಕಲ ಸುರಕುಲವ || ೮೩ ||
1.11.83_32
೮೪-೮೫
1.11.83_33
ಬಳುವಳಿಯ ನಿಖಿಳಾವನೀ ಮಂ
ಡಲವನನುಪಮ ಕೋಶ ವರ್ಗದ
ಲಲನೆಯರ ಗಜ ವಾಜಿ ರಥ ಪಾದಾತಿ ಗೋವ್ರಜವ
ಅಳಿಯಗಿತ್ತು ವಿರಾಟ ನೃಪ ಯದು
ಕುಲವನಾ ಪಾಂಚಾಲ ಚೈದ್ಯಾ
ವಳಿಯನುತ್ತಮ ವಸ್ತು ವಾಹನದಿಂದ ಮನ್ನಿಸಿದ ೮೪
1.11.85
ಆದುದಭಿಮನ್ಯುವಿನ ಮದುವೆ ಮ
ಹಾ ದಯಾಂಬುಧಿ ಕೃಷ್ಣ ರಾಯನ
ಪಾದ ದರುಶನವಾಗಲಿಮ್ಮಡಿಸಿತ್ತು ನಮ್ಮುದಯ
ಮೇದಿನಿಯ ನಾವೊತ್ತೆಯಿಟ್ಟೆವು
ಕಾದುಕೊಂಡೆವು ಸತ್ಯವನು ಮೇ
ಲಾದುದನು ನೀ ಕರುಣಿಸೆಂದರು ವೀರನರಯಣನ || ೮೫ ||[೧][೨]
1.11.85_34
ಇತಿ ಶ್ರೀಮದಚಿಂತ್ಯ ಮಹಿಮ ಗದುಗಿನ ವೀರನಾರಾಯಣ ಚರಣಾರವಿಂದ
ಮಕರಂದ ಮಧುಪಾನ ಪರಿಪುಷ್ಟ ವಚಃ ಷಟ್ಪದೀ ನಿಕಾಯ
ಶ್ರೀಮತ್ಕುಮಾರವ್ಯಾಸ ಯೋಗೀಂದ್ರ ವಿರಚಿತಮಪ್ಪ
ಕರ್ಣಾಟ ಭಾರತ ಕಥಾಮಂಜರಿಯೊಳ್
ವಿರಾಟಪರ್ವಂ ಸಮಾಪ್ತಮಾದುದು*
@@@@@@@**@@@@@@@
1.11.85_35
♠♠♠
♦
♦♣♣♣♣♣♣♣♣♣♣♣♣♣♣♣♣♣♣♣♦
ॐ
1.11.85_36
ನೋಡಿ
1.11.85_37
*ಕುಮಾರವ್ಯಾಸ ಭಾರತ
* ಕುಮಾರವ್ಯಾಸಭಾರತ-ಸಟೀಕಾ
* ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೧)
* ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೨)
* ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೩)
*ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೪)
*ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೫)
*ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೬)
*ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೭)
*ಕುಮಾರವ್ಯಾಸ ಭಾರತ/ಸಟೀಕಾ (ಪರ್ವ-೧::ಸಂಧಿ-೮)
*ಕುಮಾರವ್ಯಾಸ ಭಾರತ/ಸಟೀಕಾ (೪-ವಿರಾಟಪರ್ವ::ಸಂಧಿ-೯)
*ಕುಮಾರವ್ಯಾಸ ಭಾರತ/ಸಟೀಕಾ (೪-ವಿರಾಟಪರ್ವ::ಸಂಧಿ-೧೦)
1.11.85_38
ಪರಿವಿಡಿ
1.11.85_39
ಉಲ್ಲೇಖ