Karnata Bharata Kathamanjari 1.14.37
Karṇāṭa Bhārata Kathāmañjarī 1.14.37
- Language
- Kannada
1.14.37
ಎರಡುಕಡೆಯ೦ಬುಧಿಯ ಪಾರ್ಶ್ವದ
ದುರುಳರನು ಧಟ್ಟಿಸಿ ತದೀಯರು
ವೆರಸಿ ಬಡಗಲು ನಡೆದುದಲ್ಲಿಯ ನಿಷಧ ಪರ್ವತಕೆ |
ಎರಡು ಸಾವಿರ ಯೋಜನದ ತುದಿ
ವರೆಗೆ ಹತ್ತಿತು ಬಿಟ್ಟಿತಾ ಗಿರಿ
ಬಿರಿಯೆ ಬಿರು ಸೂಳೈಸಿದವು ನಿಸ್ಸಾಳ ಕೋಟಿಗಳು || ೩೭ ||