Karnata Bharata Kathamanjari 1.14.61
Karṇāṭa Bhārata Kathāmañjarī 1.14.61
- Language
- Kannada
1.14.61
ಧಾರುಣೀಪತಿ ಕೇಳು ದಳ ನಡು
ದಾರಿ ಬಡಗಣ ಶೃ೦ಗಪರ್ವತ
ದೋರೆಯಲಿ ದೊರೆಗಳನು ಧಟ್ಟಿಸಿ ಸೆಳೆದು ಬಹುಧನವ |
ಭಾರಣೆಯ ಮು೦ಗುಡಿಯ ಕೊಳ್ಳೆಗ
ಳೋರಣಿಸಿ ತುದಿಗೇರಿ ಸಿದ್ಧರ
ಚಾರಣರ ವಿದ್ಯಾಧರರ ಮುತ್ತಿದರು ಮನ್ನಿಸದೆ || ೬೧ ||