Karnata Bharata Kathamanjari 1.27.38
Karṇāṭa Bhārata Kathāmañjarī 1.27.38
- Language
- Kannada
1.27.38
ಝಗಝಗಿಪ ಬಾಣಾಗ್ನಿ ಭುಗುಭುಗು
ಭುಗಿಲೆನಲು ದಿವ್ಯಾಸ್ತ್ರ ತತಿಯಲಿ
ಹೊಗೆಯ ತೋರಿಸಿದೆನು ಚತುರ್ದಶ ಭುವನ ಭವನದಲಿ |
ವಿಗಡ ರದ ಲೆಕ್ಕಿಸದೆ ಲೋಟಿಸಿ
ಮಗುಚಿದರು ಮದ್ಬಾಣ ಮಹಿಮೆಯ
ನೊಗಡಿಸಿತು ಕಾಲಾಗ್ನಿ ಕಾಲಾ೦ತಕರಿಗಾ ಸಮರ ||೩೮||