Karnata Bharata Kathamanjari 1.39.20
Karṇāṭa Bhārata Kathāmañjarī 1.39.20
- Language
- Kannada
1.39.20
ಪೂತುರೇ ಬಿಲುಗಾರ ಮಝರೇ
ಸೂತನಂದನ ಬಾಣ ರಚನಾ
ನೂತನದ ಬಿಲುವಿದ್ಯೆ ಭಾರ್ಗವ ಸಂಪ್ರದಾಯವಲ |
ಆತುಕೊಳ್ಳೈ ನಮ್ಮ ಬಲುಮೆಗ
ಳೇತರತಿಶಯವೆನುತ ಸರಳಿನ
ಸೇತುವನು ಕಟ್ಟಿದನು ಗಗನಾಂಗಣಕೆ ಕಲಿಪಾರ್ಥ || ೨೦ ||