Karnata Bharata Kathamanjari 1.39.28
Karṇāṭa Bhārata Kathāmañjarī 1.39.28
- Language
- Kannada
1.39.28
ಅರಿಭಟನ ಶಿರಜಾಲವನು ಸಂ
ಹರಿಸಿದನು ನಿಮಿಷದಲಿ ಫಲುಗುಣ
ನೆರಡು ಶರದಲಿ ಸಾರಥಿಯನೈದಂಬಿನಲಿ ಹಯವ |
ಶರಚತುಷ್ಟಯದಿಂದ ಕರ್ಣನ
ಕರದ ಬಿಲ್ಲನು ಕಡಿಯೆ ಭಗ್ನೋ
ತ್ಕರುಷ ಭಂಗಿತನಾಗಿ ಮುರಿದನು ಮೌನದಲಿ ಕರ್ಣ || ೨೮ ||