Karnata Bharata Kathamanjari 1.39.37
Karṇāṭa Bhārata Kathāmañjarī 1.39.37
- Language
- Kannada
1.39.37
ಹಿಳುಕನೀದುದೊ ಗಗನವಂಬಿನ
ಜಲಧಿ ಜರಿದುದೊ ಪಾರ್ಥನೆಂಬ
ಗ್ಗಳ ವಿರಿಂಚನ ಬಾಣ ಸೃಷ್ಟಿಯೊ ಬಲ್ಲನಾವವನು |
ಇಳೆಯ ಮರ್ತ್ಯರು ಶಿವ ಶಿವಾ ತೆಗೆ
ಫಲುಗುಣಗೆ ಸರಿಯೆಂಬವರ ಬಾಯ್
ಹುಳಿವುದೋ ಗುಣಕೇಕೆ ಮತ್ಸರವೆಂದುದಮರಗಣ || ೩೭ ||