Karnata Bharata Kathamanjari 1.39.44
Karṇāṭa Bhārata Kathāmañjarī 1.39.44
- Language
- Kannada
1.39.44
ಗುರುಸುತನ ಶರಜಾಲವನು ಸಂ
ಹರಿಸಿ ಮಗುಳಸ್ತ್ರೌಘವನು ವಿ
ಸ್ತರಿಸಿದನು ಕಲಿಪಾರ್ಥನೀತನ ಸರಳುಗಳ ಸವರಿ |
ತರಣಿ ಬಿಂಬವ ನಭವ ಹೂಳ್ದುದು
ಗುರುಸುತನ ಸಾಮರ್ಥ್ಯವಿಂತಿ
ಬ್ಬರಿಗೆ ಸಮಬಲವಾಗಿ ಸಮತಳಿಸಿತ್ತು ರಣಕೇಳಿ || ೪೪ ||