Karnata Bharata Kathamanjari 1.39.84
Karṇāṭa Bhārata Kathāmañjarī 1.39.84
- Language
- Kannada
1.39.84
ದೃಗುಯುಗಳವರೆದೆರೆಯೆ ರೋಮಾ
ಳಿಗಳು ತೆಕ್ಕೆಯ ಸಾರೆ ಕೊರಳರೆ
ಮುಗುಳೆ ಹಿಂಗಾಲ್ಗೊಂಡು ಖುರವನು ತೂಗಿಯೊಲೆದೊಲೆದು |
ಬಿಗುವು ಸಹಿತವೆ ಹೊನ್ನ ಮರಗೋ
ಡುಗಳ ಮೇಲಡಗೆಡೆದು ನಿದ್ರಾ
ಮುಗುದರಾದರು ರಾವುತರು ತೂಕಡಿಸಿದವು ತುರಗ || ೮೪ ||