Karnata Bharata Kathamanjari 1.46.13
Karṇāṭa Bhārata Kathāmañjarī 1.46.13
- Language
- Kannada
1.46.13
ತಡೆದನಶ್ವತ್ಥಾಮ ಭೀಮನ
ಕಡುಹನಾ ಸಹದೇವ ನಕುಲರ
ನಡುಗಿಸಿದನುಡುಗಿಸಿದನಾಟೋಪವನು ಪವನಜನ |
ಇಡಿದುದಂಬರವಂಬಿನಲಿ ಕೈ
ಗಡಿಯನಂಬಿನ ಲಕ್ಷ್ಯಭೇದವ
ನುಡಿಯಬಲ್ಲವನಾರು ಗುರುನಂದನನ ಸಮರದಲಿ || ೧೩ ||