Karnata Bharata Kathamanjari 1.46.25
Karṇāṭa Bhārata Kathāmañjarī 1.46.25
- Language
- Kannada
1.46.25
ಬೆರಳ ತುಟಿಗಳ ಬೊಬ್ಬೆ ಮಿಗಲ
ಬ್ಬರಿಸಿದವು ನಿಸ್ಸಾಳತತಿ ಜ
ರ್ಝರ ಮೃದಂಗದ ಪಣಹ ಪಟಹದ ಗೌರುಗಹಳೆಗಳ |
ಉರು ರಭಸವಳ್ಳಿರಿಯೆ ರಥಚೀ
ತ್ಕರಣೆ ರಥಹಯ ಹೇಷಿತದ ನಿ
ಷ್ಠುರ ನಿನಾದದಲೌಕಿ ಹೊಕ್ಕನು ಶಲ್ಯನಾಹವವ || ೨೫ ||