Karnata Bharata Kathamanjari 1.46.3
Karṇāṭa Bhārata Kathāmañjarī 1.46.3
- Language
- Kannada
1.46.3
ಕ್ಷಿತಿಪ ಚಿತ್ತೈಸೀಚೆಯಲಿ ಗುರು
ಸುತ ಸುಶರ‍್ಮಕ ಶಲ್ಯ ನಿನ್ನಯ
ಸುತನು ಕೃತವರ್ಮನು ಕೃಪಾಚಾರ್ಯಾದಿಗಳು ಮಸಗಿ |
ಘೃತಸಮುದ್ರದ ಸೆರಗ ಸೋಂಕಿದ
ಹುತವಹನ ಸೊಂಪಿನಲಿ ವೈರಿ
ಪ್ರತತಿಯನು ತರುಬಿದರು ತರಿದರು ಸರಳ ಸಾರದಲಿ || ೩ ||