Karnata Bharata Kathamanjari 1.46.7
Karṇāṭa Bhārata Kathāmañjarī 1.46.7
- Language
- Kannada
1.46.7
ರಾಯ ಹೊಕ್ಕನು ಭೀಮಸೇನನ
ದಾಯ ಬಲುಹೋ ಧರ್ಮಪುತ್ರನ
ದಾಯವಲ್ಲಿದು ನೂಕೆನುತ ಕೃತವರ್ಮ ಗೌತಮರು |
ಸಾಯಕದ ಮಳೆಗರೆದು ಕೌರವ
ರಾಯನನು ಹಿಂದಿಕ್ಕಿ ವೇಢೆಯ
ವಾಯುಜನ ವಂಗಡವ ಮುರಿದರು ತರಿದರರಿಬಲವ || ೭ ||