Karnata Bharata Kathamanjari 1.46.9
Karṇāṭa Bhārata Kathāmañjarī 1.46.9
- Language
- Kannada
1.46.9
ಫಡ ಎನುತ ಪಾಂಚಾಲಬಲ ಸಂ
ಗಡಿಸಿತನಿಲಜನೊಡನೆ ಸೃಂಜಯ
ರೆಡೆಯಲಡಹಾಯಿದರು ಸುತ ಸೋಮಾದಿಗಳು ಸಹಿತ |
ಕಡೆವಿಡಿದು ಕಲಿಪಾರ್ಥನಂಬಿನ
ವಡಬನೆದ್ದುದು ಕುರುಬಲದ ಹೆ
ಗ್ಗಡಲು ಬರತುದು ಹೇಳಲೇನದ ಭೂಪ ಕೇಳೆಂದ || ೯ ||