Pramāṇa · Search · About · API

Karnata Bharata Kathamanjari 1.58: ಸಟೀಕಾ (೧೦.ಗದಾಪರ್ವ::ಸಂಧಿ-೧೨)

Karṇāṭa Bhārata Kathāmañjarī 1.58

Language
Kannada

ಸಟೀಕಾ (೧೦.ಗದಾಪರ್ವ::ಸಂಧಿ-೧೨)

1.58.p1

<ಕುಮಾರವ್ಯಾಸಭಾರತ-ಸಟೀಕಾ

1.58.p2

ಗದಾಪರ್ವ: ೧೨ ನೆಯ ಸಂಧಿ

1.58.p3

ಸೂಚನೆ

1.58.p4

ರಣವ ಶೋಧಿಸಲೆಂದು ಕಳನೊಳು
ಹೆಣನ ತುಳಿತುಳಿದರಸೆ ಕುರುಧಾ
ರುಣಿಯ ಪತಿಯನು ಕಂಡು ನೆರೆ ಮರುಗಿದಳು ಗಾಂಧಾರಿ||ಸೂಚನೆ||
ॐ

1.58.p5

ಕುರುಕ್ಷೇತ್ರ ರಣರಂಗದಲ್ಲಿ ಸ್ತ್ರೀ ಸಮೂಹ

1.58.1

ಕೇಳು ಜನಮೇಜಯ ಧರಿತ್ರೀ
ಪಾಲ ಕೃಷ್ಣನ ಕರೆದು ನಯದಲಿ
ಲೋಲಲೋಚನೆ ನುಡಿದಳಂತಸ್ತಾಪ ಶಿಖಿ ಜಡಿಯೆ |
ಏಳು ತಂದೆ ಮುಕುಂದ ಕದನ
ವ್ಯಾಳವಿಷನಿರ್ದಗ್ಧಧರಣೀ
ಪಾಲವರ್ಗವ ತೋರಿಸೆಂದಳು ತರಳೆ ಕೈಮುಗಿದು || ೧ ||

1.58.2

ನಿನ್ನ ಲೀಲೆಯ ಬೆಳೆಸಿರಿಯ ಸಂ
ಪನ್ನ ಮಾಯಾರಚನೆಯಿದು ನಿ
ರ್ಭಿನ್ನಭಾರತನಿಚಿತ ಬಹಳಾಕ್ಷೋಹಿಣೀ ದಳವ |
ತನ್ನೊಡನೆ ಹಗೆಬೆಳೆದ ಶೌರ್ಯವಿ
ಪನ್ನರನು ತೋರೈ ಜನಾರ್ದನ
ಮನ್ನಿಸೆಂದಳು ನಯನಜಲವನು ಮಿಡಿದು ಗಾಂಧಾರಿ || ೨ ||

1.58.2_6

ತಾಯೆ ಬಾ ಗಾಂಧಾರಿ ಮನದಲಿ
ನೋಯದಿರು ಪೌರಾಣಜನ್ಮದ
ದಾಯಭಾಗದ ಭೋಗ ಭಂಗಿಸಲಳುಕಲೇಕಿನ್ನು
ಸಾಯಲಾಗದೆ ಸುಭಟರಸುಗಳು
ಬೀಯವೇ ಬ್ರಹ್ಮಾದಿಗಳಿಗಿದು
ದಾಯವೀ ಸಂಸಾರವೆಂದನು ನಗುತ ಮುರವೈರಿ ೩

1.58.4

ಎಂದು ಕೈಗೊಟ್ಟಬಲೆಯನು ಹರಿ
ತಂದನಾ ಸಂಗ್ರಾಮಭೂಮಿಗೆ
ಹಿಂದೆ ಬರಲಷ್ಟಾದಶಾಕ್ಷೋಹಿಣಿಯ ನಾರಿಯರು ||
ಮುಂದೆ ಹೆಣದಿನಿಹಿಗಳು ಖಗಮೃಗ
ವೃಂದ ಚೆಲ್ಲಿತು ಭೂತ ಪೂತನಿ
ವೃಂದ ಕೆದರಿತು ಹೊಕ್ಕರಿವರದ್ಭುತರಣಾಂಗಣವ || ೪ ||

1.58.5

ಸೂಸಿತಬಲಾವೃಂದ ಕೆದರಿದ
ಕೇಶಪಾಶದ ತೆಳುವಸುರ ನಿ
ಟ್ಟಾಸುರದ ಹೊಯ್ಲುಗಳ ಲೋಚನವಾರಿಧಾರೆಗಳ |
ಆಸುರಾಕ್ರಂದನದ ಶೋಕಾ
ವೇಶ ಬಹಳದ ಬಾಲೆಯರು ಪ್ರಾ
ಣೇಶ ಮೈದೋರೆನುತ ಹೊಕ್ಕರಸಿದರು ಕಳನೊಳಗೆ || ೫ ||

1.58.6

ಹರಿದರಗಲಕೆ ನಾರಿಯರು ಕುರು
ಧರಣಿಯಲಿ ತಂತಮ್ಮ ಪತಿಗಳ
ಕರಿಗಳಲಿ ತುರಗದಲಿ ರಥದಲಿ ಕಂಡರಲ್ಲಲ್ಲಿ |
ಶಿರವ ಮುಂಡಾಡಿದರು ಹೆಣನಲಿ
ಹೊರಳಿದರು ವಿವಿಧ ಪ್ರಳಾಪದ
ಪರಿಠವವನೆಂತರಿದರೋ ವರ್ಣಿಸುವಡರಿದೆಂದ || ೬ ||

1.58.6_7

ಗಾಂಧಾರಿಯ ಶೋಕ

1.58.7

ನಡೆದಳಾ ಗಾಂಧಾರಿ ಶೋಕದ
ಕಡಲೊಳೇಳುತ ಮುಳುಗುತಂಘ್ರಿಯ
ಕೊಡಹುತರುಣಾಂಬುಗಳ ಹೊನಲಿನ ಜಾನುದಘ್ನಗಳ |
ಅಡಗಿನಲಿ ಕಾಲೂರಿ ಸಿಲುಕಿದ
ಡೊಡನೆ ಹರಿ ನೆಗಹುವನು ನರವಿನ
ತೊಡಕ ಬಿಡಿಸುತ ಹೊಕ್ಕಳಂಗನೆ ಹೆಣನ ಮಧ್ಯದಲಿ || ೭ ||

1.58.8

ಇತ್ತ ನೋಡೈ ದೇವಕೀಸುತ
ಮತ್ತಗಜ ಕಂಧರದೊಳಾ ಭಗ
ದತ್ತನನು ಕಂಡಾತನರಸಿಯರೈದೆ ಮೊಗವೆತ್ತಿ |
ಸುತ್ತ ಬರುತೈದಾರೆ ದಂತಿಯ
ಹತ್ತಲರಿಯದೆ ನೂರುಮಡಿ ಶೋ
ಕೋತ್ತರದಲದೆ ಶಿವ ಎನುತ ಮರುಗಿದಳು ಗಾಂಧಾರಿ || ೮ ||

1.58.9

ದೇವ ನೋಡಾ ಶೋಕವಹ್ನಿಯ
ಡಾವರವ ಕಾಂಭೋಜನರಸಿಯ
ರಾವ ನೋಂಪಿಯ ನೋಂತರೋ ಶಿವ ಶಿವ ಮಹಾದೇವ |
ಆವನಾತನು ನಿಮ್ಮವರುಗಳ
ಮಾವನೇ ಪಾಂಚಾಲ ಸತಿಯರು
ಜೀವದಲಿ ಜಾರಿದರು ರಮಣರ ಮೇಲೆ ತನಿಹೊರಳಿ || ೯ ||

1.58.10

ಅದೆ ವಿರಾಟನ ಸತಿಯರಚೆಯ
ಲದೆ ಘಟೋತ್ಕಚನಂಗನೆಯರಾ
ಸುದತಿಯರ ಶೋಕವ ನಿರೀಕ್ಷಿಸು ಪಂಚಕೇಕೆಯರ |
ಒದರಿ ಪಾಂಡ್ಯನ ಹೆಂಡಿರಾಚೆಯ
ಲದೆ ಸುಸೋಮಕ ಸೃಂಜಯಾದ್ಯರ
ವಧುಗಳೊರಲುತ್ತದೆ ಮುರಾಂತಕ ನಿಮ್ಮ ಸೇನೆಯಲಿ || ೧೦ ||

1.58.11

ಸುಖಿ ಕಣಾ ಭೂರಿಶ್ರವನವರ
ಸಖಿಯರದೆ ಪಾಡಳಿದು ನಿಮ್ಮಯ
ಸಖನ ಗೆಲಿಸಿದಿರಿವನ ಮುರಿದಿರಿ ರಾಧೆಯಾತ್ಮಜನ |
ನಿಖಿಳ ಯಾಚಕಜನ ಸಹಿತ ತ
ತ್ಸಖಿಯರಳುತದೆ ಕರ್ಣ ಮರಣದೊ
ಳಖಿಳಜಗ ನೀನೊಬ್ಬ ತಪ್ಪಿಸಿ ಮರುಗಿತಿಂದಿನಲಿ || ೧೧ ||

1.58.12

ಭಾನುದತ್ತನ ಮೇಲೆ ಹೊರಳುವ
ಮಾನಿನಿಯರ ನಿರೀಕ್ಷಿಸೈ ಮ
ತ್ಸೂನುಗಳ ನೋಡಿತ್ತಲಿದೆ ದುಶ್ಶಾಸನಾದಿಗಳ |
ಏನನೆಂಬೆನು ತನ್ನ ಸೊಸೆಯರ
ಹಾನಿಯನು ಮಾದ್ರೇಶನರಸಿಯ
ರೇನಧರ್ಮವ ನೆನೆದರೆಂದಳಲಿದಳು ಗಾಂಧಾರಿ || ೧೨ ||

1.58.13

ತಂದೆ ನೋಡೈ ಕೃಷ್ಣ ತನ್ನಯ
ನಂದನರು ನೂರ್ವರಿಗೆ ಕಿರಿಯಳ
ನಿಂದುಮುಖಿ ದುಶ್ಶಳೆಯನಾ ಸೈಂಧವನ ವಲ್ಲಭೆಯ|
ಅಂದು ವಿವಿಧವ್ಯೂಹದಲಿ ಗುರು
ನಿಂದಡೆಯು ಹುಸಿರಾತ್ರಿಯಲಿ ನೀ
ಕೊಂದಲೈ ತನ್ನಳಿಯನನು ವರ ಸಿಂಧುಭೂಪತಿಯ || 13 ||

1.58.14

ಕ್ಷೇಮಧೂರ್ತಿಯನಾ ಕಳಿಂಗನ
ಸೋಮದತ್ತನ ಚಿತ್ರಸೇನನ
ಭೀಮವೈರಿಯಲಂಬುಸನ ಕಿಮ್ಮಿರನಂದನನ |
ಭೌಮಸುತನ ಸುಶರ್ಮಕನ ಸು
ತ್ರಾಮರಿಪುಗಳ ಭೂರಿಬಲದ ಸ
ನಾಮರರಸಿಯರದೆ ನಿಜೇಶನ ಮೇಲೆ ತನಿಹೊರಳಿ || ೧೪ ||

1.58.14_8

ಗಾಂಧಾರಿ ತನ್ನ ಮಗ ದುರ್ಯೋಧನನ ಬಳಿಯಲ್ಲಿ

1.58.15

ಎನುತ ಬರೆಬರೆ ಮುಂದೆ ಕಂಡಳು
ತನುಜನನು ಭೀಮನ ಗದಾ ಘ
ಟ್ಟನದ ಘಾಯದ ಮೆಯ್ಯ ಖಂಡಿಸಿದೂರುಮಂಡಲದ |
ನನೆದ ಹುಡಿಮಗ್ಗುಲಿನ ರಕುತದ
ಹೊನಲ ಹೊಲಸಿದ ಘೂಕಕಾಕ
ಧ್ವನಿ ಭಯಂಕರ ಸನ್ನಿಧಾನದ ಕೌರವೇಶ್ವರನ || ೧೫ ||

1.58.16

ಇತ್ತ ನೋಡೈ ಕೃಷ್ಣ ತನ್ನಯ
ಮತ್ತದಂತಿಯನಿಂದುಕುಲ ರಾ
ಜೊತ್ತ ಮನನೇಕಾದಶಾಕ್ಷೋಹಿಣಿಯ ವಲ್ಲಭನ |
ಹತ್ತೆ ಹಿಡಿದೋಲಗಿಸುವರು ವರ
ಮತ್ತಕಾಶಿನಿಯರುಗಳೀಗಳು
ಸುತ್ತಮುತ್ತಿತು ಘೂಕ ವಾಯಸ ಜಂಬುಕವ್ರಾತ || ೧೬ ||

1.58.17

ಎನುತ ಬಿದ್ದಳು ಮೂರ್ಛೆಯಲಿ ಮಾ
ನಿನಿಯನೆತ್ತಿದನಸುರರಿಪು ನೃಪ
ವನಿತೆಯರು ಭಾನುಮತಿ ಮೊದಲಾದಖಿಳ ರಾಣಿಯರು |
ಜನಪತಿಯ ಮುಕ್ಕುರುಕಿದರು ತ
ಜ್ಜನಿತ ಶೋಕಾದ್ಭುತದ ಹಾ ಹಾ
ಧ್ವನಿಯ ಥಟ್ಟನೆ ಘಟ್ಟಿಸಿತು ಬ್ರಹ್ಮಾಂಡಮಂಡಲವ || ೧೭ ||

1.58.17_9

ಕರ್ಣನ ಶವದ ಬಳಿ ಕುಂತಿಯ ಶೋಕ

1.58.18

ಜನಪ ಕೇಳೀಚೆಯಲಿ ಕುಂತೀ
ವನಿತೆ ಕರ್ಣನ ಮೇಲೆ ಹೊರಳಿದ
ಳಿನತನುಜ ಹಾ ಕರ್ಣ ಹಾ ಹಾ ಕರ್ಣ ಹಾಯೆನುತ |
ನಿನಗೆ ಧರ್ಮಸುತಾದಿ ಭೂಮಿಪ
ರನುಜರೈ ಮಾಯಾವಿ ಮಧುಸೂ
ದನನೆ ಮರಯಿಸಿ ಕೊಂದನಕಟೆಂದೊರಲಿದಳು ಕುಂತಿ || ೧೮ ||

1.58.19

ಅರಿದನಂತಕಸೂನು ಮುರಹರ
ನಿರಿದನೇ ನಾವಿನ್ನು ಕರ್ಣಗೆ
ಕಿರಿಯರೈ ಲೇಸಾಯ್ತು ಗುರುಜನ ಬಂಧುಜನಹನನ |
ಉರುವ ಶಶಿವಂಶದ ಮಹಾನೃಪ
ರೆರಗಿದರೆ ಪಾತಕಕೆ ಮುನ್ನೆ
ಚ್ಚರಿಸದಕಟಾ ತಾಯಿ ಕೆಡಿಸಿದಳೆಂದು ಬಿಸುಸುಯ್ದ || ೧೯ ||

1.58.19_10

ಹೋಗಲಿನ್ನಾ ಕ್ಷತ್ರಧರ್ಮ
ತ್ಯಾಗ ದುರ್ವ್ಯಸನ ಪ್ರಪಂಚವ
ನೀಗಿ ಕಳೆಯೆಂದಸುರರಿಪುವೈತಂದು ಮನ್ನಿಸಿದ |
ಮೇಗಿವರ ಸಂಸ್ಕಾರಕಾರ್ಯನಿ
ಯೋಗವಿವೆ ಭಾರಂಕ ನಿನಗೆ ಸ
ರಾಗದಲಿ ಸಂತೈಸಿಯೆಂದನು ಭೂಪತಿಗೆ ಶೌರಿ ೨೦

1.58.19_11

ಯುದ್ಧದಲ್ಲಿ ಮಡಿದ ರಾಜರಿಗೆ ಅಂತ್ಯಕ್ರಿಯೆ

1.58.21

ವ್ಯಾಸ ನಾರದ ವಿದುರ ಸಾತ್ಯಕಿ
ಕೇಶವನು ದಾರುಕ ಯುಯುತ್ಸು ಮ
ಹೀಶ ಮೊದಲಾದನಿಬರರಸರ ಸಾರಥಿವ್ರಾತ |
ಆ ಸಚಿವರಾ ಹಸ್ತಿನಾಪುರ
ದಾ ಸಮಸ್ತ ಪ್ರಕೃತಿಜನ ಸಂ
ತೈಸಿದರು ಸಂಸ್ಕಾರವಿಧಿಯನು ಹತಮಹೀಶರಿಗೆ || ೨೧ ||

1.58.22

ಕುರುಪತಿಯ ರವಿಸುತನ ಮಾದ್ರೇ
ಶ್ವರನ ದುಶ್ಶಾಸನ ವಿಕರ್ಣಾ
ದ್ಯರ ಜಯದ್ರಥ ಬಾಹ್ಲಿಕರ ಭಗದತ್ತ ಲಕ್ಷಣರ
ಗುರುವರನ ಪಾಂಚಾಲ ಮತ್ಸ್ಯೇ
ಶ್ವರರ ಕುಂತೀಭೋಜನೃಪಮು
ಖ್ಯರನು ವಿಧಿಪೂರ್ವಕದಿ ದಹಿಸಿದರಾಹಿತಾಗ್ನಿಯಲಿ || ೨೨ ||

1.58.22_12

ಕಳನ ಚೌಕದ ಸುತ್ತಲೊಟ್ಟಿಸಿ
ತಳಿಗಳನು ಬಹಳಾಗ್ನಿಯನು ಕೈ
ಕೊಳಿಸಿದರು ದಹಿಸಿದರು ಬಹಳಾಕ್ಷೋಹಿಣೀಭಟರ
ಬಳಿಕ ಹಸ್ತಿನಪುರದ ಸೀಮಾ
ಸ್ಥಳಕೆ ಬಂದರು ನಿಖಿಳ ಕಾಂತಾ
ವಳಿಸಹಿತ ಗಂಗಾವಗಹನವ ಮಾಡಿದನು ನೃಪತಿ ೨೩

1.58.24

ಆ ನದಿಯ ತೀರದಲಿ ತಿಂಗಳು
ಮಾನನಿಧಿ ತತ್ಪ್ರೇತರಿಗೆ ಜಲ
ದಾನ ವಿಧಿವಿಹಿತಪ್ರಪಂಚಿತ ಸಕಲ ಸಂಸ್ಕೃತಿಯ |
ಭೂನುತನು ಮಾಡಿದನು ಬಂದುದು
ಜಾನಪದಜನವೈದೆ ಕುಂತೀ
ಸೂನುವನು ದರುಶನವ ಮಾಡಿತು ಕಾಣಿಕೆಯ ನೀಡಿ || ೨೪ ||

1.58.24_13

ಹಸ್ತಿನಾಪುರದ ಅರಮನೆಗೆ ಧರ್ಮಜನ ಪ್ರವೇಶ

1.58.25

ತಿಳುಹಿ ರಾಯನ ಹೃದಯ ಸಂಚಿತ
ಕಲುಷವನು ಖಂಡಿಸಿ ಗತಾಕ್ಷನ
ಬಲಿದ ಚಿತ್ತವ್ಯಥೆಯನಾರಿಸಿ ನೃಪವಧೂಜನದ |
ಅಳಲನಾರಿಸಿ ಗಜಪುರದ ನೃಪ
ನಿಳಯವನು ಹೊಗಿಸಿದನು ಯದುಕುಲ
ತಿಲಕ ಗದುಗಿನ ವೀರನಾರಾಯಣನು ಪಾಂಡವರ || ೨೫ ||

1.58.25_14

♠♠♠
ॐ

1.58.25_15

ನೋಡಿ

1.58.25_16

ಕುಮಾರವ್ಯಾಸ ಭಾರತ
ಕುಮಾರವ್ಯಾಸಭಾರತ-ಸಟೀಕಾ
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೧)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೨)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೩)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೪)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೫)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೬)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೭)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೮)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೯)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೧೦)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೧೧)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೧೨)
ಕುಮಾರವ್ಯಾಸ ಭಾರತ/ಸಟೀಕಾ (೧೦.ಗದಾಪರ್ವ::ಸಂಧಿ-೧೩)

1.58.25_17

ಪರಿವಿಡಿ

1.58.25_18

ಉಲ್ಲೇಖ